ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲು ಪಾಲಾಗಿದ್ದಾರೆ. ನಗುತ್ತಲೇ ಪರಪ್ಪನ ಅಗ್ರಹಾರದತ್ತ ದರ್ಶನ್ ಹೊರಟಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ದರ್ಶನ್ ಹಾಗೂ ವಿನಯ್, ಪ್ರದೋಷ್, ಧನರಾಜ್ ಅವರ ಎರಡು ದಿನದ ಪೊಲೀಸ್ ಕಸ್ಟಡಿ ಅವಧಿ ಮುಗಿದ ಕಾರಣ ಇಂದು ರಂದು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ಗೆ ಹಾಜರುಪಡಿಸಲಾಯ್ತು. ಮತ್ತೆ ಪೊಲೀಸರು ಕಸ್ಟಡಿಗೆ ಕೇಳಲಿಲ್ಲವಾದ್ದರಿಂದ ದರ್ಶನ್ ಹಾಗೂ ಇತರೆ ಮೂವರು ಆರೋಪಿಗಳಿಗೆ 13 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಯ್ತು. ಇದೇ ಪ್ರಕರಣದ ಆರೋಪಿಗಳಾದ ಪವಿತ್ರಾ ಹಾಗೂ ಇತರರಿಗೆ ಎರಡು ದಿನಗಳ ಹಿಂದೆಯೇ ನ್ಯಾಯಾಂಗ ಬಂಧನ ವಿಧಿಸಲಾಗಿದೆ.