ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಅಜೀಂ ಪ್ರೇಮ್ ಜೀ ವಿಶ್ವವಿದ್ಯಾಲಯ ಸಹಯೋಗದಲ್ಲಿ ನಡೆದ ಜನ – ವನ ಕಾರ್ಯಕ್ರಮವನ್ನ ಬನ್ನೇರುಘಟ್ಟ ಜೈವಿಕ ಉದ್ಯಾನವನದ ಕಾರ್ಯನಿರ್ವಾಹಕ ಅಧಿಕಾರಿ ಸೂರ್ಯ ಸೇನ್ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಹಮಾ ಹವಾಮಾನ ವೈಪರಿತ್ಯ ಹಾಗೂ ಜೀವ ವೈವಿಧ್ಯತೆ ವಿಷಯ ಕುರಿತು ಶಾಲಾ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು. ವಸ್ತು ಪ್ರದರ್ಶನ , ಪ್ರಕೃತಿ ಹಾಗೂ ವನ್ಯಜೀವಿಗಳ ಕುರಿತು ಕಿರು ಚಿತ್ರಗಳನ್ನ ಪ್ರದರ್ಶನ ಮಾಡುವ ಮೂಲಕ ಪ್ರಕೃತಿ ಹಾಗೂ ವನ್ಯಜೀವಿಗಳನ್ನ ಸಂರಕ್ಷಣೆ ಮಾಡುವಂತೆ ಶಾಲಾ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲಾಯಿತು.
ಬನ್ನೇರುಘಟ್ಟ ಜೈವಿಕ ಉದ್ಯಾನದ ಕಾರ್ಯ ನಿರ್ವಾಹಕ ಅಧಿಕಾರಿ ಸೂರ್ಯಸೇನ್ ಮಾತನಾಡಿ ಅಜೀಂ ಪ್ರೇಮ್ ಜೀ ವಿಶ್ವವಿದ್ಯಾಲಯ ಸಹಕಾರದಲ್ಲಿ ವಿವಿಧ ಶಾಲೆಗಳ 120 ಕ್ಕೂ ಹೆಚ್ಚು ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು,ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಜನವನ ಕಾರ್ಯಕ್ರಮದ ಮೂಲಕ ಅರಣ್ಯ ಮತ್ತು ಜನರ ನಡುವೆ ಇರುವ ಸಂಬಂಧ, ಜೀವನ ಕ್ರಮದ ಕುರಿತು ವಸ್ತು ಪ್ರದರ್ಶನವನ್ನು ಏರ್ಪಡಿಸಿ, ಕಿರು ಚಿತ್ರಗಳನ್ನು ಪ್ರದರ್ಶನ ಮಾಡಲಾಗುತ್ತಿದೆ. ಉಚಿತವಾಗಿ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರತಿಯೊಬ್ಬರು ವನ್ಯಜೀವಿಗಳ ಸಂರಕ್ಷಣೆಗೆ ಮುಂದಾಗುವುದಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಿದ್ದಾರೆ ಎಂದರು.
ಬನ್ನೇರುಘಟ್ಟ ಜೈವಿಕ ಉದ್ಯಾನವನದ ಸ್ವಯಂಸೇವಕ ಕಾರ್ತಿಕ್ ಜನವನ ಕಾರ್ಯಕ್ರಮದ ಮೂಲಕ ಐದು ದಿನಗಳ ಕಾಲ ಶಾಲಾ ಮಕ್ಕಳಿಗೆ ಕಾರ್ಯಗಾರ ಹಾಗೂ ಕಿರು ಚಿತ್ರಗಳ ಮೂಲಕ ಅರಣ್ಯ ಹಾಗೂ ಪರಿಸರ ಸಂರಕ್ಷಣೆ ಕುರಿತಂತೆ ಜಾಗೃತಿ ಮೂಡಿಸುವ ಕೆಲಸ ಮಾಡಲಾಗಿದೆ ಎಂದರು ಜನವನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ವಿದ್ಯಾರ್ಥಿನಿ ರಫಿಯಾ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಪ್ರಕೃತಿ ಹಾಗೂ ವನ್ಯಜೀವಿಗಳ ಬಗ್ಗೆ ಹಲವು ವಿಚಾರಗಳನ್ನು ತಿಳಿದುಕೊಂಡೆವು. ಮರಗಳನ್ನು ಕಡಿಯುವುದರಿಂದ ಪರಿಸರ ಮಾಲಿನ್ಯ ಹೆಚ್ಚಾಗುತ್ತಿದೆ. ನಗರ ಪ್ರದೇಶಗಳಲ್ಲಿ ಗಿಡಗಳನ್ನು ಬೆಳೆಸಿ ಪರಿಸರವನ್ನ ಉಳಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು.