ಚಾಮರಾಜನಗರ: ಭಗವಾನ್ ಶ್ರೀ ಬಿರ್ಸಾಮುಂಡಾ ಜಯಂತಿ ಹಾಗೂ ಜನಜಾತೀಯ ಗೌರವ್ ದಿವಸ್ ರಾಜ್ಯ ಮಟ್ಟದ ಕಾರ್ಯಕ್ರಮ ನಗರದಲ್ಲಿ ಅದ್ದೂರಿಯಾಗಿ ನಡೆಯಿತು. ನಗರದ ಡಾ.ಬಿ.ಅಂಬೇಡ್ಕರ್ ಭವನದಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಹಯೋಗದಲ್ಲಿ ಜಿಲ್ಲಾಡಳಿತ ಜಿಲ್ಲಾಪಂಚಾಯತ್ ಹಾಗೂ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಹಾಗೂ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಸಚಿವ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ, ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ಜಿಲ್ಲಾಧಿಕಾರಿ ಶಿಲ್ಪಾನಾಗ್ ಜಿಲ್ಲಾ ಎಸಪಿ ಪದ್ಮಿನಿಸಾಹೋ ಹಾಗೂ ಜಿಲ್ಲಾ ಹಾಗೂ ರಾಜ್ಯ ಮಟ್ಟದ ಬುಡಕಟ್ಟು ಸೋಲಿಗ ಅಭಿವೃದ್ದಿ ಸಂಘದ ಮುಖಂಡರು ಇದ್ರು.