ಬಳ್ಳಾರಿ: ಶಾಸಕ ಜನಾರ್ದನ ರೆಡ್ಡಿ ಅವರ ಕುಟೀರಕ್ಕೆ ಬೆಂಕಿ ಹಿನ್ನಲೆ ಬಳ್ಳಾರಿಯಲ್ಲಿ KRPP ಕಾರ್ಯಕರ್ತರ ಪ್ರತಿಭಟನೆ ನಡೆಸಲಾಯಿತು. ಬಳ್ಳಾರಿಯ ರಾಯಲ್ ವೃತ್ತದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಕಾರ್ಯಕರ್ತ ರಿಂದ ಪ್ರತಿಭಟನೆ ನಡೆಸಲಾಗಿದ್ದು, ಪಂಪಾಸರೋವರದ ರೆಡ್ಡಿ ಕುಟೀರಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ.
ಕೃತ್ಯ ನಡೆಸಿದ ಕಿಡಿಗೇಡಿಗಳ ಮೇಲೆ ಕ್ರಮಕ್ಕೆ ಮುಂದಾಗುವಂತೆ ಹಾಗೂ ಕಿಡಿಗೇಡಿಗಳ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಬಳ್ಳಾರಿಯಲ್ಲಿ 100 ಕ್ಕೂ ಹೆಚ್ಚು ಕಾರ್ಯಕರ್ತರ ಪ್ರತಿಭಟನೆಯಲ್ಲಿ ಭಾಗಿಯಾಗಿ ಕಿಡಿಗೇಡಿಗಳ ವಿರುದ್ಧ KRPP ಕಾರ್ಯಕರ್ತರು ಆಕ್ರೋಶ ಹೊರ ಹಾಕಿದರು.