ಭಾರತ ತಂಡದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರು ಐಸಿಸಿ ಟೆಸ್ಟ್ ಬೌಲರ್ಗಳ ಶ್ರೇಯಾಂಕದಲ್ಲಿ ಅಗ್ರ ಸ್ಥಾನವನ್ನು ಅಲಂಕರಿಸಿದ್ದಾರೆ. ಆ ಮೂಲಕ ಹಿರಿಯ ಆಫ್ ಸ್ಪಿನ್ನರ್ ಆರ್ ಅಶ್ವಿನ್ ಅವರನ್ನು ಹಿಂದಿಕ್ಕಿದ್ದಾರೆ. ಬಾಂಗ್ಲಾದೇಶ ವಿರುದ್ಧ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಜಸ್ಪ್ರೀತ್ ಬುಮ್ರಾ ಅವರು ಅತ್ಯುತ್ತಮ ಪ್ರದರ್ಶನ ತೋರಿದ್ದಾರೆ. ಇದರ ಫಲವಾಗಿ ಬುಮ್ರ ಅವರು ಶ್ರೇಯಾಂಕದಲ್ಲಿ ಅಗ್ರ ಸ್ಥಾನಕ್ಕೇರಿದ್ದಾರೆ.
IPL 2025: RCB ಫ್ಯಾನ್ಸ್ಗೆ ಬಿಗ್ ಶಾಕ್: ತಂಡದಿಂದ ಯುವ ಬ್ಯಾಟರ್ ಔಟ್!
2024ರ ಫೆಬ್ರವರಿ ತಿಂಗಳಲ್ಲಿ ಜಸ್ಪ್ರೀತ್ ಬುಮ್ರಾ ಟೆಸ್ಟ್ ಬೌಲರ್ಗಳ ಶ್ರೇಯಾಂಕದಲ್ಲಿ ಅಗ್ರ ಸ್ಥಾನವನ್ನು ಅಲಂಕರಿಸಿದ್ದರು. ಆದರೆ, ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಆರ್ ಅಶ್ವಿನ್ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ತೋರಿದ್ದರು. ಇದರ ಫಲವಾಗಿ ಬುಮ್ರಾ ಬೌಲರ್ಗಳ ಶ್ರೇಯಾಂಕದಲ್ಲಿ ಅಗ್ರ ಸ್ಥಾನವನ್ನು ಅಲಂಕರಿಸಿದ್ದರು. ಇದೀಗ ಬುಮ್ರಾ ಅಲಂಕರಿಸಿದ್ದಾರೆ. ಜಸ್ಪ್ರೀತ್ ಬುಮ್ರಾಗೂ ಮುನ್ನ ಮಾಜಿ ನಾಯಕ ಕಪಿಲ್ ದೇವ್ ಬೌಲರ್ಗಳ ಶ್ರೇಯಾಂಕದಲ್ಲಿ ಎರಡನೇ ಸ್ಥಾನವನ್ನು ಒಲ್ಲಿ ಅಲಂಕರಿಸಿದ್ದರು. 1979 ರಿಂದ 1980ರವರೆಗೂ ಕಪಿಲ್ ದೇವ್ ಎರಡನೇ ಸ್ಥಾನದಲ್ಲಿದ್ದರು.
2010ರಲ್ಲಿ ಝಹೀರ್ ಖಾನ್ ಅವರು ಮೂರನೇ ಸ್ಥಾನವನ್ನು ಅಲಂಕರಿಸಿದ್ದರು.
ಜಸ್ಪ್ರೀತ್ ಬುಮ್ರಾ ಅವರ ಜತೆಗೆ ಆರ್ ಅಶ್ವಿನ್ ಕೂಡ ಬಾಂಗ್ಲಾದೇಶ ಟೆಸ್ಟ್ ಸರಣಿಯಲ್ಲಿ 11 ವಿಕೆಟ್ಗಳನ್ನು ಕಬಳಿಸಿದ್ದರು. ಆದರೆ, ಸರಾಸರಿ ವಿಷಯದಲ್ಲಿ ಆರ್ ಅಶ್ವಿನ್ ಅವರನ್ನು ಬುಮ್ರಾ ಹಿಂದಿಕ್ಕಿದ್ದಾರೆ. ಇನ್ನೂ ತವರಿನಲ್ಲಿ ನ್ಯೂಜಿಲೆಂಡ್ ವಿರುದ್ದ 3 ಪಂದ್ಯಗಳ ಟೆಸ್ಟ್ ಸರಣಿ ಹಾಗೂ ಆಸ್ಟ್ರೇಲಿಯಾ ವಿರುದ್ದ ಐದು ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಉತ್ತಮ ಬೌಲಿಂಗ್ ಪ್ರದರ್ಶನವನ್ನು ತೋರಿದರೆ, ಆರ್ ಅಶ್ವಿನ್ ಅಗ್ರ ಸ್ಥಾನಕ್ಕೆ ಮರಳಲು ಅವಕಾಶ ಸಿಗಬಹುದು.