ಹಾಸನ: ಹಾಸನ ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಎನ್ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ದೇವರ ಮೊರೆ ಹೋಗಿದ್ದಾರೆ. ಬೆಳ್ಳಂಬೆಳಗ್ಗೆ ಟೆಂಪಲ್ ರನ್ ಮಾಡುತ್ತಿರುವ ಪ್ರಜ್ವಲ್ ರೇವಣ್ಣ, ಹೊಳೆ ನರಸೀಪುರ ತಾಲೂಕಿನ ಹರದನಹಳ್ಳಿ ಗ್ರಾಮದಲ್ಲಿರುವ ಈಶ್ವರ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.
ರಾಜ್ಯಕ್ಕೆ “ರಾಗಾ” ಎಂಟ್ರಿ: ಗಣಿನಾಡಲ್ಲಿ ಇಂದು ಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ!
ಬಳಿಕ ಪಡುವಲ ಹಿಪ್ಪೆಯಲ್ಲಿರುವ ಸರ್ಕಾರಿ ಮಾಧ್ಯಮಿಕ ಶಾಲೆಯ ಮತಗಟ್ಟೆಯಲ್ಲಿ ಮತದಾನ ಮಾಡುವ ಮೂಲಕ ತಮ್ಮ ಹಕ್ಕು ಚಲಾಯಿಸಿದರು. ಪ್ರಜ್ವಲ್ರೇವಣ್ಣ ಜೊತೆಗೆ ಅಣ್ಣ ಸೂರಜ್ ರೇವಣ್ಣ ಮತ್ತು ಅವರ ಪತ್ನಿ ಕೂಡ ಮತ ಚಲಾಯಿಸಿದ್ದಾರೆ.