ಕೋಲಾರ:- ಜೆಡಿಎಸ್ ಕೋಲಾರದಿಂದಲೂ ಕಣಕ್ಕಿಳಿಯಲಿದೆ ಎಂದು ಎಚ್ಡಿಕೆ ಘೋಷಿಸಿದ್ದಾರೆ. ಇದಕ್ಕೆ ಕೋಲಾರ ಹಾಲಿ ಸಂಸದ ಮುನಿಸ್ವಾಮಿ ಮುನಿಸಿಕೊಳ್ಳದೇ ಅವರನ್ನು ಗೌರವಿಸುತ್ತೇನೆ ಎಂದಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಇತ್ತೀಚಿನ ದಿನಗಳಲ್ಲಿ ನನಗೆ ಟಿಕೆಟ್ ಆಗಿದೆ ಎಂದು ಕೆಲವರು ಹೇಳುತ್ತಿದ್ದಾರೆ. ಬಟ್ಟೆ ಹೋಲಿಸಿದ್ದೇನೆ, ಫೋಟೋ ಶೂಟ್ ಮಾಡಿಸಿದ್ದಾರೆ ಅಂತ ಹೇಳ್ತಿದ್ದಾರೆ. ನಾನು ಬಿಜೆಪಿ ಪಕ್ಷದ ಶಿಸ್ತಿನ ಸಿಪಾಯಿ. ಹೈಕಮಾಂಡ್ ಯಾರಿಗೆ ಟಿಕೆಟ್ ನೀಡಿದ್ರು ನಾನು ಕೆಲಸ ಮಾಡುತ್ತೇನೆ. NDA ಮೈತ್ರಿ ಕೂಟ ಗೆಲ್ಲಬೇಕು. ಮೋದಿ ಮತ್ತೆ ಪ್ರಧಾನಿ ಆಗಬೇಕು ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಕೋಲಾರ ಜೆಡಿಎಸ್ ಪಾಲಾದರೂ ಸಹ ಯಾವುದೇ ಬೇಸರ ಇಲ್ಲ ಎನ್ನುವ ಮಾತುಗಳನ್ನಾಡಿದ್ದಾರೆ
6 ತಿಂಗಳಿಂದ ಬಿಜೆಪಿ ಹೈಕಮಾಂಡ್ ನಿಂದ ಮೂರ್ನಾಲ್ಕು ಸರ್ವೇ ಮಾಡಲಾಗಿದೆ. ಯಾರಿಗೆ ಟಿಕೇಟ್ ನೀಡಿದ್ರೆ ಗೆಲ್ಲುತ್ತಾರೆ ಅಂತ ನಮ್ಮ ಹೈಕಮಾಂಡ್ ಗೂ ತಿಳಿದಿದೆ. 2019 ರ ಚುನಾವಣೆಯಲ್ಲಿ ನಾನು ಕಾಂಗ್ರೆಸ್ ಮತಗಳಿಂದ ಗೆದ್ದಿದ್ದೇನೆ ಅಂತ ಜೆಡಿಎಸ್ ನ ಕೆಲವರು ಹೇಳಿದ್ದಾರೆ. ದೇಶ ಭಕ್ತರು ನನಗೆ ಮತ ನೀಡಿ, ಮೋದಿನ ಪ್ರಧಾನಿ ಮಾಡಿದ್ದಾರೆ. ಹೇಳಿಕೆ ನೀಡಿರುವ ಜೆಡಿಎಸ್ ನ ನಟರಾಜ್ ಇದನ್ನ ತಿಳಿದುಕೊಳ್ಳಬೇಕು, ಇನ್ಮುಂದೆ ನೋಡಿ ಮಾತನಾಡಬೇಕು. ಕುಮಾರಣ್ಣ ಹಾಗೂ ದೇವೇಗೌಡರ ಬಗ್ಗೆ ನನಗೆ ಅಪಾರವಾದ ಗೌರವ ಇದೆ. ನಮ್ಮ ಪಕ್ಷದ ವರಿಷ್ಠರು ತೆಗೆದುಕೊಳ್ಳುವ ತೀರ್ಮಾನಕ್ಕೆ ನಾನು ಬದ್ದ ಎಂದು ಸ್ಪಷ್ಟಪಡಿಸಿದ ಮುನಿಸ್ವಾಮಿ, ನಮ್ಮ ಕಾರ್ಯಕರ್ತರು ಮೈತ್ರಿ ಬಗ್ಗೆ ಏನೂ ಮಾತನಾಡಬಾರದು ಎಂದು ಕರೆ ನೀಡಿದರು.
ಕುಮಾರಣ್ಣ ಹಾಗೂ ದೇವೇಗೌಡರ ಬಗ್ಗೆ ನನಗೆ ಅಪಾರವಾದ ಗೌರವ ಇದೆ. ನಮ್ಮ ಪಕ್ಷದ ವರಿಷ್ಠರು ತೆಗೆದುಕೊಳ್ಳುವ ತೀರ್ಮಾನಕ್ಕೆ ನಾನು ಬದ್ದನಾಗಿದ್ದೇನೆ. ನಮ್ಮ ಕಾರ್ಯಕರ್ತರು ಮೈತ್ರಿ ಬಗ್ಗೆ ಏನೂ ಮಾತನಾಡಬಾರದು. ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ತುಂಬಾ ಬಲವಾಗಿದೆ. ಕೊನೆ ಚುನಾವಣೆಯಲ್ಲಿ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಇದ್ರು ಸಹ ನನಗೆ 7 ಲಕ್ಷ ಮತ ಬಂದಿದೆ. ನಾವೆಲ್ಲ ಈಗ ಎನ್ಡಿಎ ಅಭ್ಯರ್ಥಿ ಪರವಾಗಿ ಕೆಲಸ ಮಾಡ್ತೀವಿ. ಹೈಕಮಾಂಡ್ ಗೆ ನಮ್ಮ ಅಭಿಪ್ರಾಯ ತಿಳಿಸಿ ನಾವೆಲ್ಲಾ ಕ್ಷೇತ್ರದಲ್ಲಿ ಕೆಲಸ ಮಾಡ್ತಿದ್ದೇವೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೇರಿದಂತೆ ಎಲ್ಲರೂ ಮೋದಿ ಪರವಾಗಿ ಮತ ಹಾಕುತ್ತಾರೆ. ಈ ಬಾರಿ ಮೈತ್ರಿ ಅಭ್ಯರ್ಥಿ ಕನಿಷ್ಠ 3 ಲಕ್ಷ ಅಂತರದಲ್ಲಿ ಗೆಲ್ಲಲಿದ್ದಾರೆ ಎಂದು ಹೇಳಿದರು.