ಕೋಲಾರ:- ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಜೆಡಿಎಸ್ಗೆ ಮುಖಭಂಗವಾಗಿದ್ದು, ಜೆಡಿಎಸ್ ಸದಸ್ಯ ಬಲವಿದ್ದರೂ ಅಧ್ಯಕ್ಷ ಸ್ಥಾನ ಕಾಂಗ್ರೇಸ್ ಪಾಲಾಗಿದೆ.
ಮನೆಗಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್: 50 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿ ವಶಕ್ಕೆ
ಕೋಲಾರ ಜಿಲ್ಲೆ ಶ್ರೀನಿವಾಸಪುರ ಪುರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ನಡೆದಿದ್ದು, ಒಟ್ಟು 23 ಸದಸ್ಯರ ಬಲ ಹೊಂದಿರುವ ಪುರಸಭೆ ಇದಾಗಿದೆ. ಕಾಂಗ್ರೇಸ್ 11 ಸದಸ್ಯರು ಜೆಡಿಎಸ್ 12 ಸದಸ್ಯರು ಇದ್ದರು.
ಹಾಲಿ ಜೆಡಿಎಸ್ ಶಾಸಕ ಹಾಗೂ ಸಂಸದ ಸೇರಿ 14 ಸದಸ್ಯರ ಬಲವನ್ನು ಜೆಡಿಎಸ್ ಹೊಂದಿತ್ತು. ಅಧ್ಯಕ್ಷರ ಸ್ಥಾನಕ್ಕೆ ಕಾಂಗ್ರೇಸ್ ನಿಂದ ಬಾಸ್ಕರ್ ಜೆಡಿಎಸ್ ನಿಂದ ವೆಂಕಟರೆಡ್ಡಿ ನಾಮಪತ್ರ ಸಲ್ಲಿಕೆ ಮಾಡಿದ್ದರು. ಜೆಡಿಎಸ್ ನಿಂದ ಐದು ಜನ ಸದಸ್ಯರ ಗೈರು ಹಿನ್ನೆಲೆ, ಬಹುಮತವಿದ್ದರೂ ಅಧ್ಯಕ್ಷ ಸ್ಥಾನವನ್ನು ಜೆಡಿಎಸ್ ಕಳೆದುಕೊಂಡಿದೆ.
ಅಧ್ಯಕ್ಷರಾಗಿ ಕಾಂಗ್ರೆಸ್ ನ ಭಾಸ್ಕರ್ ಆಯ್ಕೆ ಆದರೆ, ಉಪಾಧ್ಯಕ್ಷರಾಗಿ ಜೆಡಿಎಸ್ನ ಸುನಿತ ಅವಿರೋಧ ಆಯ್ಕೆಯಾಗಿದ್ದಾರೆ. ಶಾಸಕ ವೆಂಕಟಶಿವಾರೆಡ್ಡಿ ಹಾಗೂ ಸಂಸದ ಮಲ್ಲೇಶ್ ಬಾಬು ತೀವ್ರ ಮುಖಭಂಗ ಅನುಭವಿಸಿದ್ದಾರೆ.
ಪುರಸಭೆ ಎದುರು ಕಾಂಗ್ರೇಸ್ ಕಾರ್ಯಕರ್ತರ ಸಂಭ್ರಮ ಮನೆ ಮಾಡಿದ್ದು, ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.