ದೇವನಹಳ್ಳಿ:- ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ತೀವ್ರ ವಾಗ್ದಾಳಿ ಮಾಡಿದ್ದಾರೆ.
Crime News: ಕುಡಿದ ಮತ್ತಿನಲ್ಲಿ ದೊಣ್ಣೆಯಿಂದ ಹೊಡೆದು ವ್ಯಕ್ತಿಯ ಕೊಲೆ!
ಈ ಸಂಬಂಧ ಮಾತನಾಡಿದ ಅವರು, ಕಾಂಗ್ರೆಸ್ ಗ್ಯಾರಂಟಿ ಯೋಜನೆಯಿಂದಾಗಿ ಜೆಡಿಎಸ್ ಪಕ್ಷಕ್ಕೆ ಹಿನ್ನಡೆಯಾಗಿಲ್ಲ. ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಕಾಂಗ್ರೆಸ್ ಯೋಜನೆಗಳ ಬಗ್ಗೆ ನಿಖಿಲ್ ಕುಮಾರಸ್ವಾಮಿ ಅಪಸ್ವರ ಎತ್ತಿದ್ದಾರೆ. ಕಳೆದ ರಾಜ್ಯ ಉಪ ಚುನಾವಣೆಯಲ್ಲಿ ಗ್ಯಾರೆಂಟಿಗಳನ್ನ ಕಾಂಗ್ರೆಸ್ ದುರ್ಬಳಿಕೆ ಮಾಡಿಕೊಂಡಿದೆ.
ಉಪಚುನಾವಣೆ ಅವಧಿಯಲ್ಲಿ ಜನರಿಗೆ ಗ್ಯಾರಂಟಿ ಹಣ ನೀಡಿ ಕಾಂಗ್ರೆಸ್ ಆಮೀಸ ಒಡ್ಡಿದೆ. ಆದ್ರೇ ಚುನಾವಣೆ ಮುಗಿದ ಬಳಿಕ ಗ್ಯಾರಂಟಿ ಯೋಜನೆಗಳನ್ನ ಕಾಂಗ್ರೆಸ್ ಕಡೆಗಣಿಸಿದೆ. ಮುಂದಿನ ದಿನಗಳಲ್ಲಿ ಗ್ರಾಹಕರಿಂದಲೇ ವಿದ್ಯುತ್ ಬಿಲ್ ಪಾವತಿಸಿಕೊಳ್ಳುವ ಅನುಮಾನ ಇದೆ. ಇವರ ನಾಟಕವನ್ನ ರಾಜ್ಯದ ಜನತೆ ಸೂಕ್ಷ್ಮ ವಾಗಿ ಗಮನಿಸುತ್ತಿದ್ದಾರೆ. ರಾಜ್ಯದ ಜನತೆಯ ದುಡ್ಡನ ಅವರ ಚುನಾವಣೆಗಳಿಗೆ ಬಳಕೆ ಮಾಡಿಕೊಂಡಿದ್ದಾರೆ. ಮುಂದಿನ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಳಿಗೂ ಇದೇ ತಂತ್ರ ಮಾಡ್ತಾರೆ ಎಂದು ಕಾಂಗ್ರೆಸ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ತೀರ್ವ ವಾಗ್ದಾಳಿ ಮಾಡಿದ್ದಾರೆ.