ಕಾರವಾರ: ಕಾರವಾರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಚಿವ ಆನಂದ್ ಆಸ್ನೋಟಿಕರ್, ಕುಮಾರಸ್ವಾಮಿ ಬಿಜೆಪಿ ಜತೆ ಕೈಜೋಡಿಸಿದ್ದು ನನ್ನ ಕ್ಷೇತ್ರದ ಜನರಿಗೆ ಸಂತೋಷವಾಗಿದೆ. ಕುಮಾರಸ್ವಾಮಿಯವರನ್ನು ಭೇಟಿಯಾಗಿ ಪಕ್ಷದಲ್ಲಿದ್ದುಕೊಂಡೇ ಜೆಡಿಎಸ್ ಬಲಪಡಿಸುವುದಾಗಿ ತಿಳಿಸಿದ್ದೇನೆ. ಸರಕಾರ ಬಂದು 6 ತಿಂಗಳಾಗಿದ್ದು, ಗ್ಯಾರಂಟಿಗಳ ಮೂಲಕ ಸರಕಾರ ಜನರ ಬೆಂಬಲ ಪಡೆದಿತ್ತು.
ಈ ಸರಕಾರ ಮಾಡುವ ಲೋಪ, ದೋಷಗಳು, ಸಮಸ್ಯೆಗಳು ಮುಂತಾದ ವಿಷಯಗಳ ಬಗ್ಗೆ ಕುಮಾರಣ್ಣ ಮಾತನಾಡುತ್ತಲೇ ಬಂದಿದ್ದಾರೆ. ನಾನು ಲೋಕಸಭೆ ಚುನಾವಣೆಯ ಆಕಾಂಕ್ಷಿ ಎಂದು ಹಿಂದಿನಿಂದಲೂ ಹೇಳುತ್ತಾ ಬಂದಿದ್ದೇನೆ. ನಾನು ಮೋದಿಯವರ ಅಭಿಮಾನಿ ಎಂದು ಅಂದಿನಿಂದ ಹೇಳಿದ್ದು, ಅವರ ವಿರುದ್ಧ ಯಾವ ವಿಷಯಾನೂ ಮಾತನಾಡಿಲ್ಲ.
ಭೂ ವಿಜ್ಞಾನಿ ಪ್ರತಿಮಾ ಹತ್ಯೆ ಕೇಸ್: ತನಿಖೆ ವೇಳೆ ಸ್ಪೋಟಕ ವಿಚಾರ ಬೆಳಕಿಗೆ
ನಮ್ಮ ರಾಷ್ಟ್ರ ಉಳಿಬೇಕಾದರೆ, ಅಭಿವೃದ್ಧಿಗೆ ಪ್ರಧಾನಿ ಮೋದಿಯವರ ಅವಶ್ಯಕತೆಯಿದೆ. ಈ ಹಿಂದೆ ನನಗೆ ಕ್ಷೇತ್ರದ ಬಗ್ಗೆ ಅಷ್ಟೊಂದು ಮಾಹಿತಿಯಿರಲಿಲ್ಲ. ಆದರೆ, ಮುಂದಕ್ಕೆ ಜೆಡಿಎಸ್ ಅಭ್ಯರ್ಥಿಗೆ ಅವಕಾಶ ಸಿಕ್ಕಲ್ಲಿ ಉತ್ತರಕನ್ನಡ ಜಿಲ್ಲೆಯಲ್ಲಿ 100% ಜೆಡಿಎಸ್ ಗೆಲ್ಲುತ್ತದೆ ಎಂದರು.