ಬೆಂಗಳೂರು: ಹಾಸನ ಪ್ರಕರಣ ಸೇರಿ ಪೆನ್ ಡ್ರೈವ್ ಹಂಚಿಕೆ ಪ್ರಕರಣಗಳ ತನಿಖೆ ಇತ್ಯಾದಿ ವಿಷಯಗಳ ಬಗ್ಗೆ ಮಾಜಿ ಮುಖ್ಯಮಂತ್ರಿ H.D ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಜೆಡಿಎಸ್ ನಿಯೋಗವು ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಿದ್ರು. ಈ ನಿಯೋಗದಲ್ಲಿ ವಿಧಾನ ಪರಿಷತ್ ಸದಸ್ಯ TA ಶರವಣ, ಶಾಸಕ ಜಿ,ಟಿ. ದೆವೇಗೌಡ ಸೇರಿದಂತೆ ಜೆಡಿಎಸ್ ನ ಅನೇಕ ನಾಯಕರು ಭಾಗವಹಿಸಿದ್ದರು.
ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವನ್ನು ಹರಿಬಿಟ್ಟಂತಹ ನವೀನ್ ಗೌಡ ವಿರುದ್ಧವು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ಮಹಿಳೆಯರ ವಿಡಿಯೋವನ್ನು ಈ ರೀತಿ ಹರಿದಾಡಲು ಮುಖ್ಯ ಕಾರಣರಾದ ಡಿಕೆ ಶಿವಕುಮಾರ್ ಅವರನ್ನು ಕ್ಯಾಬಿನೆಟ್ ನಿಂದ ಅಮಾನತುಗೊಳಿಸಬೇಕೆಂದು ಮನವಿ ಸಲ್ಲಿಸಿದ್ರು.
ಸಚಿವರೇ ಈ ವಿಡಿಯೋಗಳ ವಿತರಣೆಯ ರೂವಾರಿಯಾಗಿದ್ದು. ಹೀಗಾಗಿ ಸಂತ್ರಸ್ಥ ಮಹಿಳೆಯರಿಗೆ ನ್ಯಾಯ ದೊರಕಿಸುವುದು ಅಸಾಧ್ಯ. ಹರಿಯಬಿಟ್ಟಿರುವ ವಿಡಿಯೋಗಳಿಂದ ಸಂತ್ರಸ್ಥೆಯರು ಅಪಾರ ನೋವು, ಅವಮಾನ ಮತ್ತು ಯಾತನೆ ಅನುಭವಿಸುತ್ತಿದ್ದಾರೆ. ಇವರೊಂದಿಗೆ ಸಂತ್ರಸ್ಥೆ ಕುಟುಂಬದವರ ಮೇಲೆ ಉಂಟಾಗಿರುವ ಹಾನಿ ಮತ್ತು ಅಪಮಾನ ವಿವರಿಸಲು ಅಸಾಧ್ಯ. ವಿಡಿಯೋದಲ್ಲಿರುವ ಮಹಿಳೆಯರ ಗುರುತು ಬಹಿರಂಗ ಆಗುವಂತೆ ಮಾಡಿರುವುದು ಅಕ್ಷಮ್ಯ ಅಪರಾಧವಾಗಿದೆ. ಈ ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಲು ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾದಳ ವಿಫಲವಾಗಿದೆ. ಈ ಹಿನ್ನಲೆಯಲ್ಲಿ ಸಂತ್ರಸ್ಥ ಮಹಿಳೆಯರಿಗೆ ಹಾಗೂ ಅವರ ಕುಟುಂಬದವರಿಗೆ ನ್ಯಾಯ ಒದಗಿಸುವಲ್ಲಿ ಎಸ್ ಐಟಿ ವಿಫಲವಾಗಿದೆ. ಸಿಬಿಐ ತನಿಖೆಯಿಂದ ಮಾತ್ರ ಸತ್ಯಾಂಶ ಹೊರಬರಲಿದೆ ಎಂದು ಈ ಸಂದರ್ಭದಲ್ಲಿ H.D ಕುಮಾರಸ್ವಾಮಿ ತಿಳಿಸಿದರು.
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹೆಸರೂಗಳನ್ನು ಹೊಳೆನರಸಿಪುರದ ಬಿಜೆಪಿ ಮುಖಂಡರು, ವಕೀಲರಾದ ದೇವರಾಜೇಗೌಡರು ಸುದ್ದಿಗೋಷ್ಠಿಯಲ್ಲಿ ಸಾಕ್ಷಿ ಸಮೇತ ಬಹಿರಂಗ ಮಾಡಿದ್ದರು. ಇದನ್ನು ಎಸ್ ಐಟಿ ಗಣನೆಗೆ ತೆಗೆದುಕೊಂಡಿಲ್ಲವೇಕೆ ಎಂದು HDK ಪ್ರಶ್ನೆ ಮಾಡಿದ್ದಾರೆ.