ಬೆಂಗಳೂರು:- ಕೆಲಸ ಹುಡುಕಿ ಸುಸ್ತಾದವರು, ಓದು ಮುಗಿಸಿ ಕೆಲಸ ಹುಡುಕಲು ಹೊರಟವರಿಗೆ ಪ್ರೆಸಿಡೆನ್ಸಿ ಫೌಂಡೇಷನ್ ನಡೆಸಿದ ಉದ್ಯೋಗ ಮೇಳ ಹೊಸ ಆಸೆ ಚಿಗುರಿಸುವ ಕೆಲಸ ಮಾಡಿದೆ. ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಸಹಯೋಗದಲ್ಲಿ ನಡೆದ ಬೃಹತ್ ಉದ್ಯೋಗ ಮೇಳದ ಮಾಹಿತಿ ಇಲ್ಲಿದೆ.
ನಿರುದ್ಯೋಗಿ ಯುವಕ, ಯುವತಿಯರಿಗೆ ಉದ್ಯೋಗ ಸೃಷ್ಟಿಸುವ ಕೆಲಸ ಮಾಡುತ್ತಿರುವ ಪ್ರೆಸಿಡೆನ್ಸಿ ಫೌಂಡೇಷನ್ ಇಂದು ಮಿಲ್ಲರ್ಸ್ ರಸ್ತೆಯ ಈದ್ಗಾ ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಿತ್ತು. ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಸಹಯೋಗದಲ್ಲಿ ನಡೆದ ಬೃಹತ್ ಉದ್ಯೋಗಮೇಳದಲ್ಲಿ ನೂರಾರು ಉದ್ಯೋಗಾಂಕ್ಷಿಗಳು ಭಾಗಿಯಾಗಿದರು.
ಸುಮಾರು 200ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿದ್ದ ಉದ್ಯೋಗ ಮೇಳದಲ್ಲಿ ಸಚಿವ ಜಮೀರ್ ಅಹ್ಮದ್ ಹಾಗೂ ಮಾಜಿ ಸಚಿವ ಅಶ್ವಥ್ ನಾರಾಯಣ ಭಾಗಿಯಾಗಿ ಉದ್ಯೋಗಾಂಕ್ಷಿಗಳಿಗೆ ಶುಭ ಹಾರೈಸಿದರು