ಬೆಂಗಳೂರು:- ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಜಿಕ್ಸ್ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಪ್ರಾಜೆಕ್ಟ್ ಸೈಂಟಿಫಿಕ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ.
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಇಂದು ಸಂದರ್ಶನ ನಡೆಯಲಿದೆ.
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಜಿಕ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಫಿಜಿಕ್ಸ್ನಲ್ಲಿ ಎಂ.ಎಸ್ಸಿ ಪೂರ್ಣಗೊಳಿಸಿರಬೇಕು.
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಜಿಕ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 30 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಮಾಸಿಕ ₹60,000
ಉದ್ಯೋಗದ ಸ್ಥಳ:
ಬೆಂಗಳೂರು
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ