ರಾಜಧಾನಿ ಬೆಂಗಳೂರಿನಲ್ಲಿ ಖಾಲಿ ಇರುವ ಉದ್ಯೋಗಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ನಿಮ್ಹಾನ್ಸ್ ಅರ್ಜಿ ಆಹ್ವಾನಿಸಿದೆ.
ಒಟ್ಟು 1 ಸೀನಿಯರ್ ರೆಸಿಡೆಂಟ್ ಸೈಕಿಯಾಟ್ರಿ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 3, 2024 ಅಂದರೆ ನಾಳೆ ಬೆಳಗ್ಗೆ 10.30ಕ್ಕೆ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವವರಿಗೆ ಇದು ಬಂಪರ್ ಅವಕಾಶವಾಗಿದೆ.
ಶೈಕ್ಷಣಿಕ ಅರ್ಹತೆ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂ.ಡಿ, ಡಿಎನ್ಬಿ ಸೈಕಿಯಾಟ್ರಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಮಾಸಿಕ ₹ 1,10,000
ಉದ್ಯೋಗದ ಸ್ಥಳ:
ಬೆಂಗಳೂರು
ಸಂದರ್ಶನ ನಡೆಯುವ ಸ್ಥಳ:
NBRC 4 ನೇ ಮಹಡಿ
ನಿಮ್ಹಾನ್ಸ್
ಬೆಂಗಳೂರು-560029