ಭಾರತದ ಸರ್ವೋಚ್ಛ ನ್ಯಾಯಾಲಯ ಅಥವಾ ಭಾರತದ ಸುಪ್ರೀಂ ಕೋರ್ಟ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಸುಪ್ರೀಂ ಕೋರ್ಟ್ (SCI) ಲಾ ಕ್ಲರ್ಕ್ ಕಮ್ ರಿಸರ್ಚ್ ಅಸೋಸಿಯೇಟ್ ಹುದ್ದೆಗಳಿಗೆ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಅರ್ಜಿ ಪ್ರಕ್ರಿಯೆಯು ಜನವರಿ 14 ರಿಂದ ಪ್ರಾರಂಭವಾಗಿದ್ದು, ಫೆಬ್ರವರಿ 7, 2025 ರವರೆಗೆ ಮುಂದುವರಿಯುತ್ತದೆ. CSI sci.gov.in ನ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
SCI ಕಾನೂನು ಕ್ಲರ್ಕ್ ನೇಮಕಾತಿ ಅರ್ಹತಾ ಮಾನದಂಡ:
ಲಾ ಕ್ಲರ್ಕ್ ಕಮ್ ರಿಸರ್ಚ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಾನೂನಿನಲ್ಲಿ ಪದವೀಧರರಾಗಿರುವುದು ಕಡ್ಡಾಯವಾಗಿದೆ. ಐದು ವರ್ಷಗಳ ಇಂಟಿಗ್ರೇಟೆಡ್ ಕಾನೂನು ಕೋರ್ಸ್ ಪೂರ್ಣಗೊಳಿಸಿದ ಅಭ್ಯರ್ಥಿಗಳು ಸಹ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿದಾರರ ವಯಸ್ಸು 7 ಫೆಬ್ರವರಿ 2025 ರಂತೆ 20 ರಿಂದ 32 ವರ್ಷಗಳ ನಡುವೆ ಇರಬೇಕು.
SCI ಕಾನೂನು ಕ್ಲರ್ಕ್ ನೇಮಕಾತಿ ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವ ಅಭ್ಯರ್ಥಿಯು ರೂ 500 ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಅರ್ಜಿ ಶುಲ್ಕವನ್ನು ಆನ್ಲೈನ್ ಮೋಡ್ ಮೂಲಕ ಮಾತ್ರ ಪಾವತಿಸಬೇಕು. UCO ಬ್ಯಾಂಕ್ ಒದಗಿಸಿದ ಪಾವತಿ ಗೇಟ್ವೇ ಮೂಲಕ ಶುಲ್ಕವನ್ನು ಆನ್ಲೈನ್ನಲ್ಲಿ ಪಾವತಿಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ, ಅಭ್ಯರ್ಥಿಗಳು ಬಿಡುಗಡೆಯಾದ ನೇಮಕಾತಿ ಜಾಹೀರಾತನ್ನು ಪರಿಶೀಲಿಸಬಹುದು.
SCI ಕಾನೂನು ಕ್ಲರ್ಕ್ ನೇಮಕಾತಿಗೆ ಅರ್ಜಿ ಸಲ್ಲಿಸುವುದು ಹೇಗೆ?
- ಅಧಿಕೃತ ವೆಬ್ಸೈಟ್ sci.gov.in ಗೆ ಭೇಟಿ ನೀಡಿ.
- ಮುಖಪುಟದಲ್ಲಿ ನೀಡಿರುವ ಸೂಚನೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ.
- ಈಗ ನೇಮಕಾತಿ ಟ್ಯಾಬ್ ಮೇಲೆ ಕ್ಲಿಕ್ ಮಾಡಿ.
- ಇಲ್ಲಿ ಲಾ ಕ್ಲರ್ಕ್ ಕಮ್ ರಿಸರ್ಚ್ ಅಸೋಸಿಯೇಟ್ ಅಧಿಸೂಚನೆಯನ್ನು ಕ್ಲಿಕ್ ಮಾಡಿ.
- ಈಗ ನಿಯಮಗಳ ಪ್ರಕಾರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಮತ್ತು ಶುಲ್ಕವನ್ನು ಪಾವತಿಸಿದ ನಂತರ ಅದನ್ನು ಸಲ್ಲಿಸಿ.
SCI ಲಾ ಕ್ಲರ್ಕ್ ಹುದ್ದೆಯ ಆಯ್ಕೆ ಪ್ರಕ್ರಿಯೆ:
ಅರ್ಜಿದಾರರನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಪರೀಕ್ಷೆಯಲ್ಲಿ ಬಹು ಆಯ್ಕೆಯ ಮಾದರಿಯ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಪರೀಕ್ಷೆಯನ್ನು 9 ಮಾರ್ಚ್ 2025 ರಂದು ನಡೆಸಲಾಗುವುದು. ಲಿಖಿತ ಪರೀಕ್ಷೆಯಲ್ಲಿ ಯಶಸ್ವಿಯಾದ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬೇಕು.