ಬೆಂಗಳೂರು:- ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ವ್ಯಾಪಕ ವಿರೋಧ ವ್ಯಕ್ತವಾದ ಬೆನ್ನಲ್ಲೇ ಮಸೂದೆಯನ್ನು ರಾಜ್ಯ ಸರ್ಕಾರ ತಡೆಹಿಡಿದಿದೆ.
ಬೆಳಗಾವಿಯಲ್ಲಿ ಅಮಾನವೀಯ ಘಟನೆ: ಬುದ್ಧಿಮಾಂದ್ಯೆ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ!
ಮಸೂದೆ ಮಂಡನೆಗೆ ಮುಂದಾಗಿದ್ದ ಸಿದ್ದರಾಮಯ್ಯ ಸರ್ಕಾರದ ನಡೆಗೆ ಉದ್ಯಮಿಗಳು ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ, ಮಸೂದೆ ಮಂಡನೆ ನಿರ್ಧಾರದಿಂದ ಹಿಂದೆ ಸರಿದಿದೆ.
ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಸಂಪುಟ ಅನುಮೋದನೆ ನೀಡಲಾಗಿದ್ದ ವಿಧೇಯಕವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಮತ್ತೊಮ್ಮೆ ಪರಾಮರ್ಶಿಸಿ ನಿರ್ಧರಿಸಲಾಗುವುದು ಎಂದು ರಾಜ್ಯ ಸಚಿವಾಲಯ ತಿಳಿಸಿದೆ.
ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿ ನಿಗದಿಪಡಿಸುವ ವಿಧೇಯಕಕ್ಕೆ ಸೋಮವಾರ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿತ್ತು. ಇದರ ಬೆನ್ನಲ್ಲೇ ಈ ಮಸೂದೆಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ಕಂಪನಿಯವರು ವಿರೋಧ ವ್ಯಕ್ತಪಡಿಸಿದ್ದರು. ಕಿರಣ್ ಮಜುಂದಾರ್, ಮೋಹನ್ ದಾಸ್ ಪೈ ಸೇರಿದಂತೆ ಹಲವು ಉದ್ಯಮಿಗಳು ರಾಜ್ಯ ಸರ್ಕಾರದ ನಡೆಗೆ ಅಸಮಾಧಾನ ಹೊರಹಾಕಿದ್ದರು
ಈ ರೀತಿಯ ಕ್ರಮದಿಂದ ಐಟಿ ಉದ್ಯಮಕ್ಕೆ ತೊಂದರೆಯಾಗಲಿದೆ. ಉದ್ಯಮದಲ್ಲಿ ಗುಣಮಟ್ಟದ ಸೇವೆ ನೀಡಲು ಸಮಸ್ಯೆಯಾಗುತ್ತದೆ ಎಂದು ಉದ್ಯಮಿಗಳು ಆಕ್ಷೇಪ ಎತ್ತಿದ್ದರು. ಕೆಲವರಂತೂ ಇದು ತಾರತಮ್ಯದ ಮಸೂದೆ ಎಂದು ಆಕ್ಷೇಪ ವ್ಯಕ್ತಪಸಿಡಿದ್ದರು. ಅಲ್ಲದೇ ಕೆಲ ಐಟಿ-ಬಿಟಿಗಳು ಸಹ ಸರ್ಕಾರಕ್ಕೆ ನೀಡಿದ್ದವು. ಹೀಗೆ ಉದ್ಯಮ ವಲಯದಲ್ಲಿ ಆಕ್ಷೇಪ ಕೇಳಿಬಂದ ನಂತರ ಎಚ್ಚೆತ್ತ ಸಿದ್ದರಾಮಯ್ಯ ಸರ್ಕಾರ, ಮೀಸಲಾತಿ ಮಸೂದೆ ಮಂಡನೆ ನಿರ್ಧಾರದಿಂದ ಹಿಂದೆ ಸರಿದಿದೆ.