ವೆಲ್ಲಿಂಗ್ಟನ್ ನಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಎರಡನೇ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್ 76 ಓವರ್ಗಳಲ್ಲಿ ಐದು ವಿಕೆಟ್ಗೆ 378 ರನ್ ಗಳಿಸಿದೆ. ಅದ್ಭುತ ಫಾರ್ಮ್ನಲ್ಲಿ ಜೋ ರೂಟ್ ಹ್ಯಾರಿ ಬ್ರೂಕ್ ಕೂಡ ಅರ್ಧಶತಕ ಸಿಡಿಸಿ ಅಬ್ಬರಿಸಿದರು. ಬ್ರೂಕ್ 61 ಎಸೆತಗಳಲ್ಲಿ 51 ರನ್ಗಳಿಸಿದರೆ, ಮಾಜಿ ನಾಯಕ ರೂಟ್ 106 ಎಸೆತ, 5 ಬೌಂಡರಿ ಸಹಿತ ಅಜೇಯ 73 ರನ್ಗಳಿಸಿ 3ನೇ ದಿನಕ್ಕೆ ಬ್ಯಾಟಿಂಗ್ ಕಾಯ್ದಿರಿಸಿದ್ದಾರೆ.
ಹೌದು ವೆಲ್ಲಿಂಗ್ಟನ್ನಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್ನಲ್ಲಿ ಜೋ ರೂಟ್ 76 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಇದರೊಂದಿಗೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಧಿಕ ಬಾರಿ 50+ ಸ್ಕೋರ್ಗಳಿಸಿದ ವಿಶ್ವದ ನಾಲ್ಕನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.
ರೈತರೇ ಗಮನಿಸಿ.. ಪೆಟ್ರೋಲ್/ಡೀಸೆಲ್ ಆಧಾರಿತ ಪಂಪ್ ಸೆಟ್ʼಗಳಿಗೆ ಸಿಗಲಿದೆ 90% ಸಹಾಯಧನ!
ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್. 1989 ರಿಂದ 2013ರ ನಡುವೆ 200 ಟೆಸ್ಟ್ ಪಂದ್ಯಗಳಲ್ಲಿ 329 ಇನಿಂಗ್ಸ್ ಆಡಿರುವ ಸಚಿನ್ ತೆಂಡೂಲ್ಕರ್ ಒಟ್ಟು 119 ಬಾರಿ 50+ ಸ್ಕೋರ್ಗಳಿಸಿದ್ದಾರೆ. ಸಚಿನ್ ನಂತರದ ಸ್ಥಾನಗಳಲ್ಲಿ ಜಾಕ್ಸ್ ಕಾಲಿಸ್ ಹಾಗೂ ರಿಕಿ ಪಾಂಟಿಂಗ್ ಇದ್ದಾರೆ. 1995 ರಿಂದ 2013 ರ ನಡುವೆ 280 ಟೆಸ್ಟ್ ಇನಿಂಗ್ಸ್ ಆಡಿರುವ ಜಾಕ್ಸ್ ಕಾಲಿಸ್ 103 ಬಾರಿ ಅರ್ಧಶತಕಕ್ಕಿಂತ ಹೆಚ್ಚು ರನ್ಗಳಿಸಿದ್ದಾರೆ. ಹಾಗೆಯೇ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ 287 ಇನಿಂಗ್ಸ್ಗಳಲ್ಲಿ 103 ಬಾರಿ 50+ ಸ್ಕೋರ್ಗಳಿಸಿದ್ದಾರೆ.
ಇದೀಗ 276ನೇ ಇನಿಂಗ್ಸ್ನಲ್ಲಿ ಅರ್ಧಶತಕ ಬಾರಿಸುವ ಮೂಲಕ ಜೋ ರೂಟ್ ಟೆಸ್ಟ್ ಕ್ರಿಕೆಟ್ನಲ್ಲಿ 100 ಬಾರಿ 50+ ಸ್ಕೋರ್ಗಳಿಸಿದ ದಾಖಲೆ ಬರೆದಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಇಂಗ್ಲೆಂಡ್ನ ಮೊದಲ ಬ್ಯಾಟರ್ ಹಾಗೂ ವಿಶ್ವದ 4ನೇ ಬ್ಯಾಟ್ಸ್ಮನ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.