ಬೆಂಗಳೂರು:- ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದೆ ಶರಣಾಗಿದ್ದ 6 ನಕ್ಸಲರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ನಾಗರೀಕರ ಗಮನಕ್ಕೆ: ಬೆಂಗಳೂರಿನ ಈ ಏರಿಯಾದಲ್ಲಿ ನಾಳೆ ವಿದ್ಯುತ್ ವ್ಯತ್ಯಯ!
ಮುಂಡಗಾರು ಲತಾ, ಸುಂದರಿ ಕೊತ್ಲೂರು, ವನಜಾಕ್ಷಿ ಬಾಳೆಹೊಳೆ, ಜಿಶಾ, ವಸಂತ್ ಟಿ.ಎನ್, ಮಾರೆಪ್ಪ ಅರೋಲಿ ಅವರನ್ನು ಇಂದು ಚಿಕ್ಕಮಗಳೂರು ಡಿವೈಎಸ್ಪಿ ಬಾಲಾಜಿ ಸಿಂಗ್ ಎನ್ಐಎ ವಿಶೇಷ ಕೋರ್ಟ್ನ ನ್ಯಾಯಾಧೀಶರಾದ ಗಂಗಾಧರ್ ಮುಂದೆ ಹಾಜರುಪಡಿಸಿದ್ದರು.
ಆರು ನಕ್ಸಲರಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಲಾಗಿದೆ. ಜನವರಿ 30ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ. ಕೆಲವೇ ಕ್ಷಣಗಳಲ್ಲಿ ನಕ್ಸಲರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗುವುದು.
ಶರಣಾದ 6 ನಕ್ಸಲರನ್ನು ಪೊಲೀಸರು ಕೋರ್ಟ್ಗೆ ಹಾಜರುಪಡಿಸಿದ್ದರು. ಸಿಟಿ ಸಿವಿಲ್ ಕೋರ್ಟ್ ಸಂಕೀರ್ಣದ NIA ಕೋರ್ಟ್ಗೆ ಹಾಜರು ಪಡಿಸಲಾಗಿತ್ತು. ನಕ್ಸಲರನ್ನು ಕೋರ್ಟ್ಗೆ ಹಾಜರು ಪಡಿಸಿರುವ ಹಿನ್ನೆಲೆಯಲ್ಲಿ ಖುದ್ದು ಡಿಸಿಪಿ ಹೆಚ್.ಟಿ. ಶೇಖರ್ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ವಹಿಸಲಾಗಿತ್ತು. ನಕ್ಸಲರನ್ನು ಕೋರ್ಟ್ಗೆ ಹಾಜರುಪಡಿಸುವ ಮುನ್ನ 6 ನಕ್ಸಲರಿಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ನಡೆಸಲಾಗಿತ್ತು. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಖಚಿತಪಡಿಸಿಕೊಳ್ಳಲಾಗಿತ್ತು ಎನ್ನಲಾಗಿದೆ.