ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಪ್ರಕರಣದ A2 ಆರೋಪಿ ನಟ ದರ್ಶನ್ ಗೆ ಜುಲೈ 4 ರವರೆಗೂ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ಕರ್ನಾಟಕದಲ್ಲಿ ಜೂ.25 ರವರಗೆ ಭಾರೀ ಮಳೆ… ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್..!
ಇಂದು ನಾಲ್ವರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ದರ್ಶನ್ ಸೇರಿ ನಾಲ್ವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಯಿತು. ಈ ಮೂಲಕ 13 ವರ್ಷಗಳ ನಂತರ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ ದರ್ಶನ್ ಹೋಗಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ದರ್ಶನ್ ಹಾಗೂ ವಿನಯ್, ಪ್ರದೋಷ್, ಧನರಾಜ್ ಅವರ ಎರಡು ದಿನದ ಪೊಲೀಸ್ ಕಸ್ಟಡಿ ಅವಧಿ ಮುಗಿದ ಕಾರಣ ಇಂದು ರಂದು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ಗೆ ಹಾಜರುಪಡಿಸಲಾಯ್ತು. ಮತ್ತೆ ಪೊಲೀಸರು ಕಸ್ಟಡಿಗೆ ಕೇಳಲಿಲ್ಲವಾದ್ದರಿಂದ ದರ್ಶನ್ ಹಾಗೂ ಇತರೆ ಮೂವರು ಆರೋಪಿಗಳಿಗೆ 13 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಯ್ತು. ಇದೇ ಪ್ರಕರಣದ ಆರೋಪಿಗಳಾದ ಪವಿತ್ರಾ ಹಾಗೂ ಇತರರಿಗೆ ಎರಡು ದಿನಗಳ ಹಿಂದೆಯೇ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಇನ್ನೂ ಆಕ್ಷೇಪಣೆ ಬಂದ ಬಳಿಕ ದರ್ಶನ್ ರನ್ನು ಬೇರೆ ಜೈಲಿಗೆ ಶಿಪ್ಟ್ ಮಾಡುವ ಆದೇಶವನ್ನು ನ್ಯಾಯಾಧೀಶರು ಕಾಯ್ದಿರಿಸಿದ್ದಾರೆ. ಬೇರೆ ಜೈಲು ಶಿಪ್ಟ್ ಆದೇಶ ಸೋಮವಾರಕ್ಕೆ ಮುಂದೂಡಲಾಗಿದೆ.