ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಮತ್ತು ಗ್ಯಾಂಗ್ಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಕೋರ್ಟ್ ಆದೇಶ ಹೊರಡಿಸಿದೆ. ಸೆ.12ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶಿಸಿದೆ.
ದರ್ಶನ್ ಅವರು ಬಳ್ಳಾರಿ ಜೈಲಿನಿಂದ, ಪವಿತ್ರಾ ಗೌಡ ಬೆಂಗಳೂರು ಕೇಂದ್ರ ಕಾರಾಗೃಹದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾದರು. ಅದೇ ರೀತಿ ಈ ಪ್ರಕರಣದಲ್ಲಿ ಬೇರೆ ಬೇರೆ ಜೈಲು ಸೇರಿರುವ ಎಲ್ಲರೂ ವಿಚಾರಣೆ ಎದುರಿಸಿದರು. ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ ಆಗಿದೆ. ಸೆಪ್ಟೆಂಬರ್ 12ರಂದು ಇವರು ಮತ್ತೆ ಕೋರ್ಟ್ ಎದುರು ಹಾಜರಾಗಬೇಕಾಗಿದೆ.