ಚಿಕ್ಕೋಡಿ: ಬಿಜೆಪಿ ಪಕ್ಷಕ್ಕೆ ಭ್ರಷ್ಟ ಲೇಬಲ್ ಬರಲು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಣ. ಅವರ ನಾಯಕತ್ವವವನ್ನು ನಾನು ಒಪ್ಪುವುದಿಲ್ಲ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಅಥಣಿ ಪಟ್ಟಣದಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಅವರು ವಿಜಯೇಂದ್ರ ಅವರ ರಾಜ್ಯಾಧ್ಯಕ್ಷ ಸ್ಥಾನವನ್ನು ನಾನು ಎಂದಿಗೂ ಒಪ್ಪುವುದಿಲ್ಲ. ಮುಂದಿನ ಅಧ್ಯಕ್ಷ ಯಾರು ಎಂಬುದು ಪಕ್ಷದ ವರಿಷ್ಠರು ತೀರ್ಮಾನ ಮಾಡಬೇಕು ಎಂದರು.
Headache: ಪದೇ ಪದೇ ತಲೆನೋವು ಕಾಡ್ತಿದ್ರೆ ಈ ಟಿಪ್ಸ್ ಫಾಲೋ ಮಾಡಿ ತಲೆನೋವು ಮಂಗಮಾಯವಾಗುತ್ತೆ!
ವಿಜಯೇಂದ್ರ ಪಕ್ಷದಲ್ಲಿ ಜೂನಿಯರ್, ಯಾವುದೇ ಸಿದ್ಧಾಂತ ಇಲ್ಲ. ಭಾರತಿಯ ಜನತಾ ಪಕ್ಷದ ಭ್ರಷ್ಟ ಅಂತ ಲೇಬಲ್ ಕೊಟ್ಟಿದ್ದು ವಿಜಯೇಂದ್ರ. ನಾನು ಯಡಿಯೂರಪ್ಪನವರನ್ನು ಯಾವತ್ತೂ ವಿರೋಧ ಮಾಡುವುದಿಲ್ಲ. ಯಡಿಯೂರಪ್ಪ ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕರು. ಯಡಿಯೂರಪ್ಪರ ಬಗ್ಗೆ ನಮಗೆ ತುಂಬಾ ಗೌರವವಿದೆ ಎಂದು ಹೇಳಿದರು. ವಿಜಯೇಂದ್ರ ನಮ್ಮ ಪಕ್ಷದ ನಾಯಕನಲ್ಲ. ಸಾಮೂಹಿಕ ನಾಯಕತ್ವಕ್ಕೆ ಒತ್ತು ಕೊಡುವಂತೆ ನಾವು ಮೊನ್ನೆ ಸಭೆಯಲ್ಲಿ ಹೇಳಿದ್ದೇವೆ. 15 ರಿಂದ 20 ಜನರ ಸಾಮೂಹಿಕ ನಾಯಕತ್ವದ ಕೈಯಲ್ಲಿ ನಾಯಕತ್ವ ಕೊಡುವಂತೆ ಮನವಿ ಮಾಡಿದ್ದೇವೆ ಎಂದರು.