ಪೋಷಕಾಂಶಗಳಿಂದ ಸಮೃದ್ಧವಾಗಿರುವ ಪಪ್ಪಾಯಿ ಹಣ್ಣನ್ನು ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ಸಾಕಷ್ಟು ಪ್ರಯೋಜನಗಳಿವೆ ಎಂದು ಎನ್ನುತ್ತಾರೆ ಆರೋಗ್ಯ ತಜ್ಞರು. NIH ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಪಪ್ಪಾಯಿಯಲ್ಲಿರುವ ಕಿಣ್ವವಾದ ಪಪೈನ್, ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಬೆಳಗ್ಗೆ ಎದ್ದ ನಂತರ ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿಯನ್ನು ತಿನ್ನುವುದರಿಂದ ನಮಗೆ ಹಲವಾರು ಪ್ರಯೋಜನಗಳನ್ನು ಸಿಗುತ್ತದೆ. ಹಾಗಾದ್ರೆ ಅವು ಯಾವುವು ಎಂದು ತಿಳಿದುಕೊಳ್ಳೋಣ ಬನ್ನಿ.
ಶಕ್ತಿಯನ್ನು ನೀಡುತ್ತದೆ
ಪಪ್ಪಾಯ ಹಣ್ಣಿನಲ್ಲಿ ನೈಸರ್ಗಿಕವಾದ ಸಿಹಿ ಅಂಶ, ವಿಟಮಿನ್ ಗಳು, ಹಾಗೂ ಮಿನಿರಲ್ ಅಂಶಗಳಿರುವುದರಿಂದ, ಇದನ್ನು ಸೇವಿಸಿದರೆ ದೇಹಕ್ಕೆ ತಕ್ಷಣ ಶಕ್ತಿ ದೊರೆಯುತ್ತದೆ ಹಾಗೂ ಹೆಚ್ಚು ಸಮಯದ ಕಾಲ ಹಸಿವಾಗುವುದಿಲ್ಲ.
ಚರ್ಮದ ಹೊಳಪನ್ನು ಹೆಚ್ಚಿಸುತ್ತದೆ
ಪಪ್ಪಾಯ ಹಣ್ಣಿನಲ್ಲಿ ವಿಟಮಿನ್ ಎ ಹೆಚ್ಚಾಗಿರುವುದರಿಂದ ಆರೋಗ್ಯಕರವಾದ ತ್ವಚೆಯನ್ನು ಹೊಂದಬಹುದು. ಖಾಲಿ ಹೊಟ್ಟೆಯಲ್ಲಿ ಪರಂಗಿ ಹಣ್ಣನ್ನು ತಿನ್ನುವು ದರಿಂದ ಮೊಡವೆಗಳು, ಸಣ್ಣ ಸಣ್ಣ ಗುಳ್ಳೆಗಳು, ಚರ್ಮದ ವಯಸ್ಸಾಗವಿಕೆ ಪ್ರಕ್ರಿಯೆ ಹೀಗೆ ಅನೇಕ ಸಮಸ್ಯೆಗಳು ಇಲ್ಲವಾಗುತ್ತವೆ.
ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ
ಪಪ್ಪಾಯ ಹಣ್ಣಿನಲ್ಲಿ ವಿಟಮಿನ್ ಎ, ಸಿ ಮತ್ತು ಕೆ ಗಳ ಯಥೇಚ್ಛವಾಗಿರುವುದರಿಂದ ಇದು ದೇಹದಿಂದ ವಿಷಕಾರಿ ಅಂಶಗಳನ್ನು ತೆಗೆದುಹಾಕುವ ಮೂಲಕ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
ತೂಕ ಕಡಿಮೆ ಮಾಡಿಕೊಳ್ಳಲು ಸಹಕಾರಿ
ಪಪ್ಪಾಯದಲ್ಲಿ ನಾರಿನ ಅಂಶ ಹೆಚ್ಚಿಗೆ ಇದ್ದು, ಕ್ಯಾಲೋರಿ ಕಡಿಮೆ ಇರುವುದರಿಂದ ತೂಕ ಇಳಿಸಿಕೊಳ್ಳಬೇಕು ಎನ್ನುವವರಿಗೆ ಇದು ವರದಾನವೇ ಸರಿ. ಇದನ್ನು ಸೇವಿಸುವದರಿಂದ ಇತರೆ ಅನಾರೋಗ್ಯಕರ ಆಹಾರವನ್ನು ತೆಗೆದುಕೊಳ್ಳಬೇಕೆನ್ನುವ ಬಯಕೆ ಕಡಿಮೆಯಾಗುತ್ತದೆ.
ನಿಮ್ಮ ಮನಸ್ಥಿತಿಯನ್ನು ಸಮತೋಲನದಲ್ಲಿಡುತ್ತದೆ ಹಾಗೂ ಬುದ್ಧಿಶಕ್ತಿಯನ್ನು ಹೆಚ್ಚಿಸುತ್ತದೆ
ಪಪ್ಪಾಯ ಸೇವನೆಯ ಮತ್ತೊಂದು ಬಹುದೊಡ್ಡ ಪ್ರಯೋಜನವೆಂದರೆ, ಇದರಲ್ಲಿ ಫೊಲೇಟ್ ಹಾಗೂ ವಿಟಮಿನ್ ಬಿ ಅಂಶ ಹೆಚ್ಚಾಗಿದೆ. ಇವು ಮೆದುಳು ಹಾಗೂ ಮನಸ್ಥಿತಿಯ ನಿಯಂತ್ರಣಕ್ಕೆ ಬಹಳ ಸಹಕಾರಿ. ಖಾಲಿ ಹೊಟ್ಟೆಯಲ್ಲಿ ಇದನ್ನು ಸೇವಿಸುವುದರಿಂದ ಬುದ್ಧಿಶಕ್ತಿ ಹೆಚ್ಚಾಗುವುದಲ್ಲದೆ, ದಿನಪೂರ್ತಿ ನಿಮ್ಮ ಮನಸ್ಥಿತಿ ಉತ್ತಮವಾಗಿರುತ್ತದೆ.
ಕಣ್ಣು ಹಾಗೂ ದೃಷ್ಟಿಗೆ ಒಳ್ಳೆಯದು
ಪರಂಗಿಯಲ್ಲಿ ಬೆಟಾ ಕ್ಯಾರೋಟಿನ್, ಹಾಗೂ ವಿಟಮಿನ್ ಎ ಹೇರಳವಾಗಿರುವುದರಿಂದ ವಯಸ್ಸಾದಂತೆ ದೃಷ್ಟಿ ಕಡಿಮೆಯಾಗುವ ಅಪಾಯವನ್ನು ಕಡಿಮೆ ಮಾಡುತ್ತದೆ. ಜೊತೆಗೆ, ಕಣ್ಣಿನ ದೃಷ್ಟಿ ಸಾಮರ್ಥ್ಯವನ್ನು ಸಹ ಹೆಚ್ಚಿಸುತ್ತದೆ.
ಜೀರ್ಣಕ್ರಿಯೆಗೆ ಸಹಕಾರಿ
ಪಪ್ಪಾಯವನ್ನು ಖಾಲಿ ಹೊಟ್ಟೆಗೆ ಸೇವಿಸುವುದರಿಂದ ಜೀರ್ಣಾಂಗ ವ್ಯವಸ್ಥೆಶುದ್ಧವಾಗುತ್ತದಂತೆ. ಇದು ಜೀರ್ಣಕಾರಿ ಕಿಣ್ವಗಳನ್ನು ಹೊಂದಿರುವುದರಿಂದ ಇದು ಕರುಳಿನ ಚಲನೆಗಳನ್ನು ಸುಗಮಗೊಳಿಸುತ್ತದೆ. ಜೊತೆಗೆ, ಹೊಟ್ಟೆ ಉಬ್ಬರ, ಮತ್ತು ಮಲಬದ್ಧತೆಯಂತಹ ಜೀರ್ಣಾಂಗಕ್ಕೆ ಸಂಬಂಧಿಸಿಂದ ಸಮಸ್ಯೆಗಳಿಗೆ ರಾಮಬಾಣವಂತೆ.
ಉರಿಯೂತವನ್ನು ಕಡಿಮೆ ಮಾಡುತ್ತದೆ
ಪರಂಗಿಯ ಮತ್ತೊಂದು ಲಾಭವೆಂದರೆ, ಇದು ದೇಹದ ಉರಿಯೂತವನ್ನು ಕಡಿಮೆ ಮಾಡುತ್ತದೆ. ಈ ಸಮಸ್ಯೆಯಿಂದ ಬಳಲುವವರಿಗೆ ಇದೊಂದು ಬಗೆಯ ಸಿದ್ಧೌಷಧವೆಂದರೆ ತಪ್ಪಾಗಲಾರದು.
ಹೃದಯದ ಆರೋಗ್ಯಕ್ಕೆ ಒಳ್ಳೆಯದು
ಪಪ್ಪಾಯಿಯಲ್ಲಿ ಫೈಬರ್, ಪೊಟ್ಯಾಸಿಯಮ್ ಮತ್ತು ವಿಟಮಿನ್ ಗಳು ಹೆಚ್ಚಾಗಿರುವುದರಿಂದ, ಹೃದ್ರೋಗಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಜೊತೆಗೆ, ಇದರಲ್ಲಿರುವ ವಿಟಮಿನ್ ಬಿ, ಸಿ, ಇ, ಬೀಟಾ-ಕ್ಯಾರೋಟಿನ್ ಮತ್ತು ಲೈಕೋಪೀನ್ ನಂತಹ ಪೋಷಕಾಂಶಗಳು, ಹೃದಯದಲ್ಲಿರುವ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ.