ಹುಬ್ಬಳ್ಳಿ; ನೇಹಾ ಹಿರೇಮಠ ಕೊಲೆಯ ಪ್ರಕರಣ ಖಂಡಿಸಿ ಹುಬ್ಬಳ್ಳಿಯಲ್ಲಿಂದು ಮಳೆಯಲ್ಲಿಯೂ ಶ್ರೀ ಜಗದ್ಗುರು ರೇಣುಕಾಚಾರ್ಯ ಫೌಂಡೇಶನ್ ನಿಂದ ಹುಬ್ಬಳ್ಳಿಯ ಚೆನ್ನಮ್ಮ ವೃತ್ತದ ಬಳಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ನೇಹಾ ಹಿರೇಮಠ ಕೊಲೆ ಮಾಡಿರುವ ಆರೋಪಿಗೆ ಕೂಡಲೇ ಗಲ್ಲು ಶಿಕ್ಷೆ ವಿಧಿಸಬೇಕು. ಅಲ್ಲದೇ ರಾಜ್ಯದಲ್ಲಿ ಹೆಣ್ಣುಮಕ್ಕಳಿಗೆ ಭದ್ರತೆ ನೀಡುವ ಕಾರ್ಯವನ್ನು ಮಾಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆ ಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಇನ್ನೂ ಪ್ರತಿಭಟನೆಯಲ್ಲಿಯ ಮೂಲಕ ಹುಬ್ಬಳ್ಳಿಯ ತಹಶಿಲ್ದಾರರ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ತಹಶಿಲ್ದಾರರ ಕಚೇರಿಯ ಮುಂದೆಯೇ ಆಕ್ರೋಶ ವ್ಯಕ್ತಪಡಿಸಿ, ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.