ಬೆಂಗಳೂರು:- ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಸಚಿವ ಕೆ.ಎನ್.ರಾಜಣ್ಣಹಾಗೂ ಶಾಸಕ ಶಾಮನೂರು ಶಿವಶಂಕರಪ್ಪಗೆ ಶಿಸ್ತು ಮೀರಿ ಮಾತನಾಡದಂತೆ ವಾರ್ನಿಂಗ್ ಮಾಡಿದ್ದಾರೆ.
ಬಿಜೆಪಿ ಸಂಸದ ರಾಘವೇಂದ್ರ ಗೆಲ್ಲಿಸುವಂತೆ ಶಾಮನೂರು ಶಿವಶಂಕರಪ್ಪ ಅವರು ಕರೆ ನೀಡಿದ್ದರು. ಸಚಿವ ಕೆ.ಎನ್.ರಾಜಣ್ಣ ಅವರು, ನಾವು ಕಾಂಗ್ರೆಸ್ ಹೈಕಮಾಂಡ್ ಗುಲಾಮರಲ್ಲ ಎಂದಿದ್ದರು. ಈ ಹಿನ್ನೆಲೆಯಲ್ಲಿ ಇಬ್ಬರಿಗೂ ಕರೆ ಮಾಡಿರುವ ಕೆ.ಸಿ ವೇಣುಗೋಪಾಲ್ ಅವರು ನೋಟಿಸ್ ನೀಡುವ ಎಚ್ಚರಿಕೆ ನೀಡಿದ್ದಾರೆ.
ಲೋಕಸಭಾ ಚುನಾವಣೆ ಇದೆ ಎಂಬ ಕಾರಣಕ್ಕೆ ಸದ್ಯಕ್ಕೆ ನೋಟಿಸ್ ನೀಡುತ್ತಿಲ್ಲ. ಹೀಗೆ ವಿವಾದಾತ್ಮಕವಾಗಿ ಮಾತನಾಡುವುದು ಮುಂದುವರಿದರೆ ನೋಟಿಸ್ ನೀಡಬೇಕಾಗುತ್ತದೆ. ಅಲ್ಲದೆ ಶಿಸ್ತುಬದ್ಧ ಕ್ರಮ ಎದುರಿಸಬೇಕಾಗುತ್ತದೆ ಎಂದೂ ವಾರ್ನ್ ಮಾಡಿದ್ದಾರೆ ಎಂಬ ಮಾಹಿತಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.