ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾನ ‘ಡುಮ್ಮ’ ಎಂದು ಕರೆದು ಕಾಂಗ್ರೆಸ್ ನಾಯಕಿ ಇದೀಗ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.
ಅರಗಿಣಿ ಮೇಲೆ ‘ವಿದ್ಯಾಪತಿ’ಗೆ ಲವ್… ಸೂಪರ್ ಸ್ಟಾರ್ ವಿದ್ಯಾ ಪ್ರೀತಿಯಲ್ಲಿ ಬಿದ್ದ ನಾಗಭೂಷಣ್
ಕಾಂಗ್ರೆಸ್ ಪಕ್ಷದ ನಾಯಕಿ ಡಾ. ಶಮಾ ಮೊಹಮ್ಮದ್ ಅವರು, ಸೋಷಿಯಲ್ ಮೀಡಿಯಾ ಪೋಸ್ಟ್ನಲ್ಲಿ ರೋಹಿತ್ ಶರ್ಮಾ ಅವರ ದೇಹದ ಬಗ್ಗೆ ಪ್ರಸ್ತಾಪಿಸಿ, ಹಿಟ್ಮ್ಯಾನ್ ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಂತ ಪ್ರಭಾವಶಾಲಿಯಲ್ಲದ ನಾಯಕ ಎಂದು ಬರೆದಿದ್ದಾರೆ.
ಕಾಂಗ್ರೆಸ್ ರಾಷ್ಟ್ರೀಯ ವಕ್ತಾರೆಯಾಗಿರುವ ಶಮಾ ಮೊಹಮ್ಮದ್ ಅವರ ಈ ಹೇಳಿಕೆಗೆ ಇದೀಗ ಭಾರೀ ಆಕ್ರೋಶಗಳು ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ಪೋಸ್ಟ್ ಡಿಲೀಟ್ ಮಾಡುವಂತೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಅಧ್ಯಕ್ಷ ಪವನ್ ಖೇರಾ ಸೂಚಿಸಿದ್ದು, ಅದರಂತೆ ಇದೀಗ ಬಾಡಿ ಶೇಮಿಂಗ್ ಬರಹವನ್ನು ಸಾಮಾಜಿಕ ಜಾಲತಾಣದಿಂದ ಅಳಿಸಿ ಹಾಕಿದ್ದಾರೆ.
ಈ ಬಗ್ಗೆ ಸ್ಪಷ್ಟನೆ ನೀಡಿರುವ ಪವನ್ ಖೇರಾ, ತಮ್ಮ ಪಕ್ಷದ ರಾಷ್ಟ್ರೀಯ ವಕ್ತಾರೆ ಡಾ. ಶಮಾ ಮೊಹಮ್ಮದ್ ಅವರು ದಿಗ್ಗಜ ಕ್ರಿಕೆಟಿಗನ ಬಗ್ಗೆ ಮಾಡಿದ ಕಾಮೆಂಟ್ಗಳು ಪಕ್ಷದ ಅಧಿಕೃತ ದೃಷ್ಟಿಕೋನವನ್ನು ಪ್ರತಿನಿಧಿಸುವುದಿಲ್ಲ. ಈ ಪೋಸ್ಟ್ ಅನ್ನು ಅಳಿಸಿ ಹಾಕುವಂತೆ ಈಗಾಗಲೇ ಸೂಚಿಸಲಾಗಿದೆ. ಭವಿಷ್ಯದಲ್ಲಿ ಇಂತಹ ಪೋಸ್ಟ್ಗಳನ್ನು ಹಾಕದಂತೆ ಸಲಹೆಯನ್ನು ನೀಡಿರುವುದಾಗಿ ತಿಳಿಸಿದ್ದಾರೆ.