ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದಲ್ಲಿರುವ ಶ್ರೀ ಸದ್ಗುರು ಕೋರಿಸಿದ್ದೇಶ್ವರ ಮಠಕ್ಕೆ ಮೇಘಾಲಯ ರಾಜ್ಯಪಾಲ ಸಿ.ಹೆಚ್ ವಿಜಯಶಂಕರ್ ಅವರು ಶುಕ್ರವಾರ ಭೇಟಿ ನೀಡಿದರು.
ತೋಟೆಂದ್ರ ಶಿವಯೋಗಿಗಳ ಪುಣ್ಯಸ್ಮರಣೋತ್ಸವ ಮತ್ತು ಶ್ರೀ ಸಿದ್ಧತೋಟೆಂದ್ರ ಶಿವಾಚಾರ್ಯರ ಜನ್ಮದಿನ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಬಳಿಕ ಮಠದ ಆವರಣದಲ್ಲಿ ನಿರ್ಮಾಣವಾಗಿರುವ ಸುವರ್ಣ ಭವನದ ಉದ್ಘಾಟನೆಯನ್ನು ನೆರವೇರಿಸಿದರು.
ಕೇಂದ್ರ ಸರ್ಕಾರ ತಾರತಮ್ಯ ನೀತಿ ವಿರೋಧಿಸಿ ಪ್ರತಿಭಟನೆ ಮಾಡುತ್ತೇವೆ: ಡಿಸಿಎಂ ಡಿ.ಕೆ.ಶಿವಕುಮಾರ್
ಈ ಸಂದರ್ಭದಲ್ಲಿ ಮಠದ ವತಿಯಿಂದ ರಾಜ್ಯಪಾಲರಿಗೆ ಗೌರವ ಸತ್ಕಾರ ಮಾಡಲಾಯಿತು. ಮೇಘಾಲಯ ರಾಜ್ಯಪಾಲರಿಗೆ ಸ್ಥಳೀಯ ಬಿಜೆಪಿ ನಾಯಕರು ಸಾಥ್ ನೀಡಿದರು. ನಾಲವಾರ್ ಶ್ರೀಗಳು, ಶ್ರೀಶೈಲಂ ಸಾರಂಗಮಠದ ಪೀಠಾಧಿಪತಿ ಡಾ, ಸಾರಂಗದೇಶಿಕೆಂದ್ರ ಮಹಾಸ್ವಾಮಿಗಳು, ಮಾಜಿ ಸಂಸದ ಡಾ. ಬಸವರಾಜ್ ಪಾಟೀಲ್ ಸೇಡಂ, ಶಾಸಕರಾದ ಬಿ.ಜಿ. ಪಾಟೀಲ್, ಬಸವರಾಜ್ ಮತ್ತಿಮೂಡ್ ಮುಂತಾದವರು ಉಪಸ್ಥಿತರಿದ್ದರು.