ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರು ಕಾಪು ಮಾರಿಗುಡಿಗೆ ಭೇಟಿ ಕೊಟ್ಟಿದ್ದಾರೆ. ಈ ವೇಳೆ ಮಾರಿಗುಡಿಯ ಪ್ರತಿಷ್ಠೆ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡಲು ಆಸಕ್ತಿ ಇದೆಯಾ? ಇಲ್ಲಿದೆ 400 ಹುದ್ದೆಗಳು, ಅರ್ಹರು ಇಂದೇ ಅರ್ಜಿ ಸಲ್ಲಿಸಿ!
ಮಂಡಿ ಕ್ಷೇತ್ರದ ಬಿಜೆಪಿ ಸಂಸದೆಯಾಗಿ ಆಯ್ಕೆಯಾಗಿರುವ ಕಂಗನಾ ರಣಾವತ್, ಕಾಪು ಹೊಸ ಮಾರಿಗುಡಿಗೆ ಬಂದು ದೇವರ ದರ್ಶನಗೈದು ಪ್ರಸಾದ ಸ್ವೀಕರಿಸಿದರು. ಆರ್ಎಸ್ಎಸ್ ಮುಖಂಡ ಬಿ.ಎಲ್ ಸಂತೋಷ್ ಕ್ಷೇತ್ರಕ್ಕೆ ಭೇಟಿಕೊಟ್ಟು ದೇವರ ದರ್ಶನ ಮಾಡಿದರು. ಈ ಸಂದರ್ಭದಲ್ಲಿ ಧಾರ್ಮಿಕ ಸಭೆಯಲ್ಲಿ ಭಾಗಿಯಾದರು.
ದಕ್ಷಿಣಕನ್ನಡ ಸಂಸದ ಬೃಜೇಶ್ ಚೌಟ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಮೆಂಡನ್, ದಾನಿ ಬಂಜಾರ ಪ್ರಕಾಶ್ ಶೆಟ್ಟಿ ಉಪಸ್ಥಿತರಿದ್ದರು