ನವದೆಹಲಿ:- ಚಂಡೀಗಢ ವಿಮಾನ ನಿಲ್ದಾಣದಲ್ಲಿ ಕಂಗನಾಗೆ ಕಪಾಳ ಮೋಕ್ಷ ಮಾಡಿದ CISF ಕಾನ್ಸ್ಟೇಬಲ್ ಸಸ್ಪೆಂಡ್ ಮಾಡಲಾಗಿದೆ.
ಸಿಐಎಸ್ಎಫ್ ಅಧಿಕಾರಿಗಳ ನೀಡಿರುವ ಲಿಖಿತ ದೂರಿನ ಆಧಾರದ ಮೇಲೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸಿಐಎಸ್ಎಫ್ ಕಾನ್ಸ್ಟೆಬಲ್ ವಿರುದ್ಧ ಎಫ್ಐಆರ್ ದಾಖಲಿಸಲಾಗುತ್ತಿದೆ. ಸಿಐಎಸ್ಎಫ್ನಿಂದ ಸ್ಥಳೀಯ ಪೊಲೀಸರಿಗೂ ದೂರು ನೀಡಲಾಗಿದೆ ಎಂದು ತಿಳಿದುಬಂದಿದೆ.
ಗುರುವಾರ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸಿಐಎಸ್ಎಫ್ ಕಾನ್ಸ್ಟೇಬಲ್ ನಟಿ ಕಂಗನಾ ರನೌತ್ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ. ಚೆಕಿಂಗ್ ವೇಳೆ ತಮ್ಮ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ರನೌತ್ ಆರೋಪಿಸಿದ್ದರು. ರೈತರ ಆಂದೋಲನದ ವೇಳೆ ಕಂಗನಾ ಹೇಳಿಕೆಯಿಂದ ಕೋಪಗೊಂಡ ಕಾನ್ಸ್ಟೆಬಲ್ ಬಿಜೆಪಿ ಸಂಸದೆಗೆ ಕಪಾಳಮೋಕ್ಷ ಮಾಡಿದ್ದಾರೆ ಎನ್ನಲಾಗುತ್ತಿದೆ
ಕಂಗನಾ ರನೌತ್ಗೆ ಕಪಾಳಮೋಕ್ಷ ಮಾಡಿದ ನಂತರ ವಿಮಾನ ನಿಲ್ದಾಣದಲ್ಲಿ ಭಾರೀ ಗೊಂದಲ ಉಂಟಾಗಿತ್ತು. ಕಂಗನಾ ತುಂಬಾ ಕೋಪ ಭದ್ರತಾ ಸಿಬ್ಬಂದಿ ವಿರುದ್ಧ ಕೂಗಾಡುತ್ತಿದ್ದರು. ಕಂಗನಾ ರಣಾವತ್ ಅವರ ಸಿಬ್ಬಂದಿ ಕೂಡ ಈ ಘಟನೆಯ ಬಗ್ಗೆ ಸಿಐಎಸ್ಎಫ್ ಮತ್ತು ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ತಿಳಿಸಿ ಆಕ್ರೋಶ ವ್ಯಕ್ತಪಡಿಸುತ್ತಿದ್ದದ್ದು ಕಂಡು ಬಂದಿತು.