ಕಿಚ್ಚ ಸುದೀಪ್ ನೇತೃತ್ವದಲ್ಲಿ ನಡೆಯಲಿರುವ ಚಲನಚಿತ್ರ ಕಪ್ ಕ್ರಿಕೆಟ್ ಪಂದ್ಯಾವಳಿಯ ಆಟಗಾರರ ಹರಾಜು (Auction) ಪ್ರಕ್ರಿಯೆ ಇಂದು ನಡೆಯಲಿದೆ. ಬೆಂಗಳೂರಿನಲ್ಲಿ ನಡೆಯಲಿರುವ ಹರಾಜು ಪ್ರಕ್ರಿಯೆಲ್ಲಿ ಶಿವರಾಜ್ ಕುಮಾರ್ (Shivaraj Kumar), ಸುದೀಪ್, ಉಪೇಂದ್ರ, ಗಣೇಶ್, ದುನಿಯಾ ವಿಜಯ್ ಮತ್ತು ಡಾಲಿ ಧನಂಜಯ್ ಸೇರಿದಂತೆ ಹಲವಾರು ಕಲಾವಿದರು ಭಾಗಿಯಾಗಲಿದ್ದಾರೆ. ಡಿಸೆಂಬರ್ 23 ರಿಂದ ಕ್ರಿಕೆಟ್ ಪಂದ್ಯ ಆಯೋಜನೆಯಾಗಿದೆ.
ಸ್ಯಾಂಡಲ್ ವುಡ್ ನಲ್ಲಿ ಮತ್ತೊಂದು ಮೆಗಾ ಕ್ರಿಕೆಟ್ ಪಂದ್ಯಾವಳಿ ಆಯೋಜನೆಯಾಗಿದೆ. ಕಿಚ್ಚ ಸುದೀಪ್ (Sudeep) ನೇತೃತ್ವದಲ್ಲಿ ಪ್ರತಿ ವರ್ಷವೂ ಆಯೋಜನೆಗೊಳ್ಳುವ ಕರ್ನಾಟಕ ಚಲನಚಿತ್ರ ಕಪ್ ಕ್ರಿಕೆಟ್ (Kannada Film Cup) ಪಂದ್ಯಾವಳಿ ಡಿಸೆಂಬರ್ ನಿಂದ ಆರಂಭವಾಗಲಿದೆ. ಇದರ ಉದ್ಘಾಟನೆ ಸಮಾರಂಭಕ್ಕೆ ಭಾರತೀಯ ಕ್ರಿಕೆಟ್ ದಿಗ್ಗಜರಾದ ಎಂ.ಎಸ್. ಧೋನಿ (MS Dhoni) ಮತ್ತು ಸಚಿನ್ ತೆಂಡೂಲ್ಕರ್ (Sachin Tendulkar) ಆಗಮಿಸಲಿದ್ದಾರೆ ಎನ್ನುವ ಮಾತು ಕೇಳಿ ಬರುತ್ತಿದೆ. ಈಗಾಗಲೇ ಇಬ್ಬರ ಜೊತೆ ಮಾತುಕತೆ ಕೂಡ ನಡೆಸಲಾಗಿದೆ.
ಹಲವಾರು ವರ್ಷಗಳಿಂದ ಕನ್ನಡ ಚಿತ್ರೋದ್ಯಮವನ್ನು ಸಂಘಟಿಸಿಕೊಂಡು ಕ್ರಿಕೆಟ್ (Cricket)) ಪಂದ್ಯಾವಳಿಯನ್ನು ಆಯೋಜನೆ ಮಾಡುತ್ತಾ ಬರಲಾಗಿದೆ. ಬೆಂಗಳೂರಿನಲ್ಲಿ ಮಾತ್ರವಲ್ಲ, ಹುಬ್ಬಳಿಯಲ್ಲೂ ಈ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜನೆ ಮಾಡಲಾಗಿತ್ತು. ಕನ್ನಡ ಸಿನಿಮಾ ರಂಗದ ಬಹುತೇಕ ಕಲಾವಿದರು ಮತ್ತು ತಂತ್ರಜ್ಞರು ಈ ಪಂದ್ಯಾವಳಿಯಲ್ಲಿ ಭಾಗಿಯಾಗಲಿದ್ದಾರೆ.