ಬೆಂಗಳೂರು: ಡಿಸೆಂಬರ್ 31 ರಂದು ಕರ್ನಾಟಕ ಬಂದ್ ಗೆ ಬೆಂಬಲ ನೀಡುವಂತೆ ಒತ್ತಾಯಿಸಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಸತ್ಯಾಗ್ರಹ ನಡೆಸಲಾಗುತ್ತಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದು, ಬಂದ್ ಗೆ ವಾಣಿಜ್ಯ ಮಂಡಳಿ ಬೆಂಬಲ ನೀಡುವಂತೆ ಒತ್ತಾಯಿಸಿದ್ದಾರೆ. ಬಂದ್ ದಿನವೇ 3 ಚಿತ್ರಗಳು ರಿಲೀಸ್ ಆಗುತ್ತಿದ್ದು, ಕನ್ನಡಕ್ಕೆ ಅವಮಾನ ಮಾಡಿದವರ ವಿರುದ್ಧ ನಾವು ಹೋರಾಡಲೇ ಬೇಕು ಹೀಗಾಗಿ ನಿಮ್ಮ ನೈತಿಕ ಬೆಂಬಲ ಬೇಡ. ಬಂದ್ ನಲ್ಲಿ ಭಾಗವಹಿಸಬೇಕು ಎಂದು ವಾಟಾಳ್ ನಾಗರಾಜ್ & ಸಾರಾ ಗೋವಿಂದು ತಂಡ ಪ್ರತಿಭಟನೆ ನಡೆಸುತ್ತಿದ್ದಾರೆ.
