ಬೆಂಗಳೂರು: ದಕ್ಷಿಣ ಭಾರತ ಉತ್ಸವದ ಸಂದರ್ಭದಲ್ಲಿ ಕರ್ನಾಟಕ್ಕೆ ರೂ.3750 ಕೋಟಿ ಬಂಡವಾಳ ಹರಿದು ಬಂದಿದೆ ಎಂದು ಪ್ರವಾಸೋದ್ಯಮ ಮತ್ತು ಕಾನೂನು ಸಚಿವ ಎಚ್.ಕೆ.ಪಾಟೀಲ ಇಂದಿಲ್ಲಿ ತಿಳಿಸಿದರು. ಮಾತನಾಡಿ ಕರ್ನಾಟಕದ 320 ಕಿಲೋಮೀಟರ್ ಉದ್ದದ ಕರಾವಳಿ ಕಡಲ ತೀರದಲ್ಲಿರುವ 40 ತಾಣಗಳನ್ನು ಗುರುತಿಸಲಾಗಿದೆ. ಈ ತಾಣಗಳನ್ನು ಅಭಿವೃದ್ಧಿಪಡಿಸಲು ಈಗಾಗಲೇ ಆಸಕ್ತಿ ವ್ಯಕ್ತಪಡಿಸುವುದಕ್ಕೆ ಕರೆಯಲಾಗಿದೆ. ಆಸಕ್ತಿ ವ್ಯಕ್ತಪಡಿಸಬೇಕೆಂದು ಕೈಗಾರಿಕಾ ಪತಿಗಳನ್ನು ಸಚಿವ ಎಚ್ ಕೆ ಪಾಟೀಲ್ ಕೋರಿದರು.
ಕರ್ನಾಟಕ ಪುರಾತತ್ವ ಕ್ಷೇತ್ರದಲ್ಲಿ ವಿಶೇಷ ಸ್ಥಾನದಲ್ಲಿದೆ. 25,000ಕ್ಕೂ ಹೆಚ್ಚು ಮಹತ್ವದ ಸ್ಮಾರಕಗಳು ಕರ್ನಾಟಕದಲ್ಲಿವೆ. ಆದರೆ ಈ ಎಲ್ಲಾ ಸ್ಥಾನಗಳ ಪೈಕಿ ಕೇವಲ 500 ತಾಣಗಳನ್ನು ಮಾತ್ರ ನಾವು ಸಂರಕ್ಷಿಸುತ್ತಿದ್ದೇವೆ. ಉಳಿದ ತಾಣಗಳ ಸಂರಕ್ಷಣೆಗೆ ಕಾಲಬದ್ದ ಕಾರ್ಯಕ್ರಮ ಹಾಕಿಕೊಳ್ಳಲಾಗಿದ್ದು ದತ್ತು ಸ್ಮಾರಕ ದತ್ತು ಯೋಜನೆ ಅಂತಹ ವಿಶೇಷ ಕಾರ್ಯಕ್ರಮಕ್ಕೆ ದಾನಿಗಳು ಸಹಕರಿಸಬೇಕೆಂದು ಎಚ.ಕೆ ಪಾಟೀಲ್ ಸಹಕರಿಸಲು ಮನವಿ ಮಾಡಿದರು.
https://ainlivenews.com/learn-the-importance-and-history-of-fathers-day/
ಕರ್ನಾಟಕ ಹಲವಾರು ಶ್ರದ್ಧಾ ಕೇಂದ್ರಗಳನ್ನು ಹೊಂದಿ ಅತಿ ಪವಿತ್ರವಾದ ರಾಜ್ಯಗಳಲ್ಲಿ ಕರ್ನಾಟಕ ಹಿರಿಯ ಸ್ಥಾನದಲ್ಲಿದೆ ಮಂಗಳೂರು ಉಡುಪಿ ಕಾರವಾರದಿಂದ ಹಿಡಿದು ಸವದತ್ತಿ ರೇಣುಕಾ ಯಲ್ಲಮ್ಮ, ಚಾಮುಂಡೇಶ್ವರಿ ಹುಲಿಗೆಮ್ಮ ಹೊಳಲಮ್ಮ ಬಾದಾಮಿ ಬನಶಂಕರಿ ಗಾಣಗಾಪುರ ದತ್ತಮಂದಿರ ಬೀದರ್ ಬಸವನಾಡು, ಕೂಡಲಸಂಗಮ ಸೇರಿದಂತೆ ಇಂತಹ ಪವಿತ್ರ ಸ್ಥಳಗಳಲ್ಲಿ ಕರ್ನಾಟಕ ಮೂಲಭೂತ ಸೌಲಭ್ಯ ಸೃಷ್ಟಿಸುವ ಪಿಪಿಪಿ ಮಾಡೆಲ್ ನಲ್ಲಿ ಕೈಗೆತ್ತಿಕೊಳ್ಳಲು ಸರ್ಕಾರ ನಿರ್ಣಯಿಸಿದೆ ಎಂದರು.