ಹುಬ್ಬಳ್ಳಿ: ರಾಜ್ಯದ ಪ್ರವಾಸೋದ್ಯಮವನ್ನು ವಿಶ್ವಕ್ಕೆ ಪರಿಚಯಿಸುವ ಉದ್ದೇಶದಿಂದ ಫೆ.26 ರಿಂದ ಫೆ.28 ರವರೆಗೆ ಮೂರು ದಿನಗಳ ಕರ್ನಾಟಕ ಇಂಟರ್ನ್ಯಾಷನಲ್ ಟ್ರಾವೆಲ್ ಎಕ್ಸೋ (kite) – 2025 ನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರವಾಸೋದ್ಯಮ ಸಚಿವರಾದ ಎಚ್.ಕೆ.ಪಾಟೀಲ್ ಹೇಳಿದರು.
ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವಾಸೋದ್ಯಮ ಇಲಾಖೆ ಹಾಗೂ ಕರ್ನಾಟಕ ಟೂರಿಸಂ ಸೊಸೈಟಿ ಸಹಯೋಗದಲ್ಲಿ ನಡೆಯಲಿರುವ ಈ ಸಮಾವೇಶವನ್ನು ಸಿಎಂ ಸಿದ್ದರಾಮಯ್ಯ ತಾಜ್ ವೆಸ್ಟ್ ಎಂಡ್.ರೇಸ್ ಕೋರ್ಸ್ ರಸ್ತೆಯಲ್ಲಿ ಉದ್ಘಾಟನೆ ಮಾಡಲಿದ್ದು, ಕೇಂದ್ರ ಪ್ರವಾಸೋದ್ಯಮ ಮಂತ್ರಾಲಯವು ಪಾಲ್ಗೊಳ್ಳಲಿದೆ ಎಂದರು.
ಅಬ್ಬಾ.. ವೀಳ್ಯದೆಲೆ ನೀರು ಕುಡಿದ್ರೆ ಇಷ್ಟೆಲ್ಲಾ ಲಾಭಗಳಿವೆಯಾ..? ಇಲ್ಲಿದೆ ನೋಡಿ ಮಾಹಿತಿ
ಬಳಿಕ ಫೆ.27 & 28 ರಂದು ತುಮಕೂರು ರಸ್ತೆಯ ಮಾದಾವರದಲ್ಲಿನ ಬೆಂಗಳೂರು ಇಂಟರ್ನ್ಯಾಷನಲ್ ಎಕ್ಸಿಬ್ಯೂಷನ್ ಸೆಂಟರ್ ನಲ್ಲಿ ಸಮಾವೇಶ ನಡೆಯಲಿದೆ. ಸಚಿವರು, ಶಾಸಕರು ಪಾಲ್ಗೊಳ್ಳಲಿದ್ದಾರೆ ಎಂದರು.
ಪ್ರತಿವರ್ಷ ರಾಜ್ಯಕ್ಕೆ 1 ಕೋಟಿ 25 ಲಕ್ಷಕ್ಕೂ ಅಧಿಕ ಪ್ರವಾಸಿಗಳು ಆಗಮಿಸಲಿದ್ದಾರೆ. ರಾಜ್ಯದಲ್ಲಿ ಅಸಂಖ್ಯಾತ ಪ್ರವಾಸಿ ತಾಣಗಳು, 25 ಸಾವಿರಕ್ಕೂ ಹೆಚ್ಚು ಅರಕ್ಷಿತ ಸ್ಮಾರಕಗಳಿವೆ. ಇದರಲ್ಲಿ 800ಕ್ಕೂ ಹೆಚ್ಚು ಸ್ಮಾರಕಗಳ ರಕ್ಷಣೆ ಮಾಡಲಾಗಿದೆ. ಇವುಗಳನ್ನು ಬೆಳಕಿಗೆ ತರುವ ಕೆಲಸ ಮಾಡಲಾಗುವುದು. ಈ ಮೂಲಕ ಮುಂದಿನ ಪೀಳಿಗೆಗೆ ಇವುಗಳ ಮಹತ್ವವನ್ನು ತಿಳಿಸಲಾಗುವುದು ಎಂದರು.
ಸಮಾವೇಶದಲ್ಲಿ ಕಲೆ, ಸಂಸ್ಕೃತಿ, ಪರಂಪರೆ, ಇತಿಹಾಸ, ಕರಕುಶಲ ಉತ್ಪನ್ನಗಳು, ಪಾಕ ಪದ್ದತಿ, ನೃತ್ಯ ಪ್ರಕಾರಗಳು, ಜೀವನ ಶೈಲಿ, ಅತಿಥಿ ಸತ್ಕಾರ ಸೇರಿದಂತೆ ಮುಂತಾದವು ಪ್ರದರ್ಶನಗೊಳಲಿವೆ. ಪ್ರವಾಸೋದ್ಯಮ ಸಮಗ್ರ ಬೆಳೆವಣಿಗೆ ಇದರ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.