ಬೆಂಗಳೂರು : ರಾಜ್ಯದ ಬಹುತೇಕ ಕಡೆ ಬಿಸಿಲಿನ ಝಳ ಹೆಚ್ಚಾಗಿದೆ. ಈ ಮಧ್ಯೆ ಮಾರ್ಚ್ 31ರಿಂದ ಮೂರು ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಹಾಗೂ ಮಲೆನಾಡಿನ ಕೆಲವು ಪ್ರದೇಶಗಳಲ್ಲಿ ಇಂದು ಸಹ ಮಳೆಯಾಗಲಿದೆ. ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.
Water Drought: ಬೆಂಗಳೂರಲ್ಲಿ ನೀರಿಗೆ ಬರ: ಪರಿಹಾರ ಸೂಚಿಸಿದ ಮೆಗಾಸ್ಟಾರ್ ಚಿರಂಜೀವಿ
ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ
ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದೆ. ನಗರದಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬಾಗಲಕೋಟೆಯಲ್ಲಿ 39.9 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಚಾಮರಾಜನಗರದಲ್ಲಿ 18.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.