ಬೆಂಗಳೂರು: ಭಾರತೀಯ ಹವಾಮಾನ ಇಲಾಖೆಯು, ಕರ್ನಾಟಕದ ಸುಮಾರು 16 ಜಿಲ್ಲೆಗಳಲ್ಲಿ ಅಕ್ಟೋಬರ್ 15ರವರೆಗೆ ಭಾರೀ ಮಳೆ ಆಗಲಿದೆ ಎಂದು ಮುನ್ಸೂಚನೆ ಕೊಟ್ಟಿದೆ.
Tata Group successors: ‘ರತನ್’ ಕಣ್ಮರೆ: 3,800 ಕೋಟಿ ರೂ. ಟಾಟಾ ಸಾಮ್ರಾಜ್ಯಕ್ಕೆ ಮುಂದಿನ ಉತ್ತರಾಧಿಕಾರಿ ಯಾರು..?
ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ವಿಜಯನಗರ, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಸಾಧಾರಣ ಮಳೆಯಾಗುತ್ತಿದೆ, ಎಚ್ಎಎಲ್ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.3ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.