ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನಾಳೆ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಕೇಂದ್ರ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಹಾಗೂ ಚಾಮರಾಜನಗರದ ಒಂದು
ಅಥವಾ ಎರಡು ಸ್ಥಳಗಳಲ್ಲಿ ಸಾಧಾರಣ ಮತ್ತು ಗುಡುಗು ಮಿಂಚು ಸಹಿತ ಮಳೆಯಾಗುವ ಮುನ್ಸೂಚನೆಯನ್ನ ನೀಡಿದೆ.
ಮಳೆಯಿಂದಾಗಿ ಈ ಪ್ರದೇಶಗಳಲ್ಲಿ ತಾತ್ಕಾಲಿಕವಾಗಿ ವಿದ್ಯುತ್ ವ್ಯತ್ಯಯ, ದುರ್ಬಲ ಮರದ ಕೊಂಬೆಗಳು ಕಿತ್ತುಬರುವ ಸಾಧ್ಯತೆ ಇದೆ ಎಂದು ಸಾರ್ವಜನಿಕರಿಗೆ ಎಚ್ಚರಿಯನ್ನು ನೀಡಿದೆ. ಮಳೆಯ ಹಿನ್ನೆಲೆಯಲ್ಲಿ ಹೊರಗಡೆ ತೆರಳದೆ ಮನೆಯೊಳಗೆ ಇರಿ. ಕಿಟಕಿಗಳು ಮತ್ತು ಬಾಗಿಲುಗಳನ್ನು ಮುಚ್ಚಿ. ಸಾಧ್ಯವಾದರೆ ಪ್ರಯಾಣವನ್ನು ತಪ್ಪಿಸಿ, ಸುರಕ್ಷಿತ ಆಶ್ರಯವನ್ನು ತೆಗೆದುಕೊಳ್ಳಿ. ಮರಗಳ ಕೆಳಗೆ ಆಶ್ರಯ ಪಡೆಯಬೇಡಿ ಎಂದು ವರದಿಯಲ್ಲಿ ಸೂಚನೆ ನೀಡಲಾಗಿದೆ.