ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಧಾರಾಕಾರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಬರೀ ಬನಾನ ತಿಂದು ಬೇಜಾರಾಗಿದ್ಯಾ!?, ಹಾಗಿದ್ರೆ ಈ ಬಾಳೆಹಣ್ಣಿನ ಬ್ರೇಕ್ಫಾಸ್ಟ್ ರೆಸಿಪಿ ಟ್ರೈ ಮಾಡಿ!
ಬೆಂಗಳೂರಿನಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮೋಡಮುಸುಕಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುತ್ತಿದೆ.ಎಚ್ಎಎಲ್ನಲ್ಲಿ 26.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 27.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 27.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 28.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 28.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 28.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಆರು ಜಿಲ್ಲೆಗಳಲ್ಲಿ ಇಂದು (ಜುಲೈ 16) ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ಹಾಸನ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಂಗಳವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಹೀಗಾಗಿ ಹಲಿಯಾಳ ಮತ್ತು ಮುಂಡಗೊಂಡ ತಾಲೂಕು ಹೊರತುಪಡಿಸಿ ಇನ್ನುಳಿದ 10 ತಾಲೂಕುಗಳಿಗೆ ನಾಳೆ ರಜೆ ನೀಡಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ. ಕಾರವಾರ, ಕುಮಟಾ, ಅಂಕೋಲಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ, ದಾಂಡೇಲಿ ತಾಲೂಕಿನ ಶಾಲೆಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ.