ಮಹಾರಾಷ್ಟ್ರದ ಪುಣೆಯಲ್ಲಿ ಫೆ. 13 ರಿಂದ 17 ರ ವರೆಗೆ ನಡೆದ ನ್ಯಾಷನಲ್ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್-2024 ರಲ್ಲಿ ಭಾಗವಹಿಸಿ ಜಾವೆಲಿನ್ ಥ್ರೋ ಕ್ರೀಡೆಯಲ್ಲಿ ದೊಡ್ಡಬಳ್ಳಾಪುರದ ದೈಹಿಕ ಶಿಕ್ಷಕ ಚಿನ್ನದ ಪದಕ ಗೆಲ್ಲುವ ಮೂಲಕ ಸ್ವೀಡನ್ನಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಮಾಸ್ಟರ್ಸ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲಿದ್ದಾರೆ.
ರನ್ ಮಷಿನ್ ಕಿಂಗ್ ಕೊಹ್ಲಿ ದಾಖಲೆಯನ್ನೇ ಸರಿಗಟ್ಟಿದ ಯಶಸ್ವಿ ಜೈಸ್ವಾಲ್!
ಮಲ್ಲಿಕಾರ್ಜುನ ನಗರದ ಕಾರ್ಮೆಲ್ ಜ್ಯೋತಿ ಶಾಲೆಯ ದೈಹಿಕ ಶಿಕ್ಷಕನಾಗಿ ಕಾರ್ಯ ನಿರ್ವಹಿಸುತ್ತಿದ್ದು ಜನವರಿ 6 ಮತ್ತು 7 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿನ ಚನ್ನಭೈರೇಗೌಡ ಕ್ರೀಡಾಂಗಣದಲ್ಲಿ ನಡೆದ 44ನೇ ಸ್ಟೇಟ್ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ -2024 ರಲ್ಲಿ 30 ವರ್ಷ ವಯೋಮಾನದ ವಿಭಾಗದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡುವ ಮೂಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದರು.
ಪುಣೆಯಲ್ಲಿ ನಡೆದ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಜಾವಲಿನ್ ಥ್ರೋ ಕ್ರೀಡೆಯಲ್ಲಿ ಭಾಗವಹಿಸಿ ಬಂಗಾರದ ಪದಕ ಗಳಿಸಿದ್ದಾರೆ, 2024 ರ ಅಕ್ಟೋಬರ್ ನಲ್ಲಿ ಯುರೋಪ್ ನ ಸ್ವೀಡನ್ ನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ ಕ್ರೀಡಾಕಟದಲ್ಲಿ ಭಾರತ ತಂಡ ದಿಂದ ಭಾಗವಹಿಸಲಿದ್ದಾರೆ. ಇವರ ಸಾಧನೆಗೆ ತಾಲೂಕಿನ ಶಿಕ್ಷಕರು ಹಾಗು ಜನತೆ ಶುಭಕೋರಿದ್ದಾರೆ.