ಬೆಂಗಳೂರು:- ಇಂದು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.
ಇಂದು ಬೆಳಗಾವಿ, ಧಾರವಾಡ, ಗದಗ, ಹಾವೇರಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್1 ರಿಂದ ಮೂರು ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.
Bengaluru: ವೈಟ್ ಫೀಲ್ಡ್ ವಿಭಾಗದ ರೌಡಿಶೀಟರ್ ಮನೆಗಳ ಮೇಲೆ ಪೊಲೀಸ್ ದಾಳಿ!
ಉತ್ತರ ಕನ್ನಡ, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರು, ಶಿವಮೊಗ್ಗ, ವಿಜಯನಗರದಲ್ಲಿ ಒಣಹವೆ ಮುಂದುವರೆಯಲಿದೆ.
ಚಿಕ್ಕೋಡಿಯಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 40.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಚಾಮರಾಜನಗರದಲ್ಲಿ 17.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ,
ಎಚ್ಎಎಲ್ನಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 35.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.