ಬೆಂಗಳೂರು:- ಕರ್ನಾಟಕದಲ್ಲಿ ಮುಂದಿನ 3 ದಿನ ಒಣಹವೆ, ಏಪ್ರಿಲ್ 18ರಿಂದ ಮತ್ತೆ ಮಳೆ ಶುರುವಾಗಲಿದೆ.
ಈ ಬಗ್ಗೆ ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ. ಮುಂದಿನ ಮೂರು ದಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
![Demo](https://ainlivenews.com/wp-content/uploads/2023/12/spoorthi-1.jpg)
Rohit Sharma Record: ಟಿ20 ಕ್ರಿಕೆಟ್ನಲ್ಲಿ ವಿಶ್ವ ದಾಖಲೆ ಬರೆದ ಹಿಟ್ ಮ್ಯಾನ್!
ಏಪ್ರಿಲ್ 18ರ ಬಳಿಕ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಗದಗ, ಕೊಪ್ಪಳ, ಕಲಬುರಗಿ, ರಾಯಚೂರು, ವಿಜಯಪುರ, ಬಳ್ಳಾರಿ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ರಾಮನಗರ, ತುಮಕೂರು, ವಿಜಯಪುರದಲ್ಲಿ ಮಳೆಯಾಗಲಿದೆ.
ಆಗುಂಬೆ, ಧರ್ಮಸ್ಥಳ, ಎನ್ಆರ್ಪುರ, ಧಾರವಾಡ, ಬೇವೂರು, ಮುದಗಲ್, ಇಂಡಿ, ಶಿವಮೊಗ್ಗ, ಲಿಂಗನಮಕ್ಕಿ, ಆನವಟ್ಟಿ, ಔರಾದ್, ದೇವರಹಿಪ್ಪರಗಿ, ಯಡ್ರಾಮಿ, ಕಲಘಟಗಿ, ತ್ಯಾಗರ್ತಿ, ಕಳಸ, ಹರಪನಹಳ್ಳಿ, ಕುಡತಿನಿ, ಕೊಪ್ಪ, ತರೀಕೆರೆ, ಶೃಂಗೇರಿ, ಸಿದ್ದಾಪುರ, ಸಿಂಧನೂರು, ಹಿರೆಕೆರೂರು, ಲಕ್ಷ್ಮೇಶ್ವರ, ಅಣ್ಣಿಗೆರೆ, ಕಮ್ಮರಡಿ, ಸವಣೂರು, ತಾಳಗುಪ್ಪ, ಹುಂಚದಕಟ್ಟೆಯಲ್ಲಿ ಮಳೆಯಾಗಿದೆ.
ರಾಯಚೂರಿನಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದೆ, ಎಚ್ಎಎಲ್ನಲ್ಲಿ 33.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)