ಬೆಂಗಳೂರು:- ವಿಜಯಪುರ, ಬೀದರ್ನಲ್ಲಿ ಚಳಿ ಪ್ರಮಾಣ ಹೆಚ್ಚಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ತುಂಬಾ ಚಳಿ ಇರಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲೂ ಚಳಿ ಸಾಧಾರಣವಾಗಿರಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿಯೂ ಚಳಿ, ಒಣಹವೆ ಮುಂದುವರೆಯಲಿದೆ.
ವಿಜಯಪುರ ಹಾಗೂ ಬೀದರ್ನಲ್ಲಿ 12.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಅರಬ್ಬಿ ಸಮುದ್ರದಲ್ಲಿ ಸೈಕ್ಲೋನ್ ಪರಿಚಲನೆ ಉಂಟಾಗಿದ್ದು, ಮತ್ತೆ ಕೆಲವು ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣವಿದೆ, ಎಚ್ಎಎಲ್ನಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ29.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.