2019-20ರ ಬಳಿಕ ಮೊದಲ ಬಾರಿ ಪ್ರಶಸ್ತಿ ಎತ್ತಿ ಹಿಡಿಯುವ ನಿರೀಕ್ಷೆಯಲ್ಲಿರುವ 4 ಬಾರಿ ಚಾಂಪಿಯನ್ ಕರ್ನಾಟಕ ತಂಡ, ಸೋವಿಜಯ್ ಹಜಾರೆ ಏಕದಿನ ಟೂರ್ನಿಯ ಕ್ವಾರ್ಟರ್ ಫೈನಲ್ನಲ್ಲಿ ವಿದರ್ಭ ವಿರುದ್ಧ ಸೆಣಸಾಡಲಿದೆ. ಪಂದ್ಯಕ್ಕೆ ರಾಜ್ಕೋಟ್ ಆತಿಥ್ಯ ವಹಿಸಿದ್ದು ಟಾಸ್ ಗೆದ್ದ ಕರ್ನಾಟಕ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದೆ. ಮಯಾಂಕ್ ಅಗರ್ವಾಲ್ ನಾಯಕತ್ವದ ಕರ್ನಾಟಕ ‘ಸಿ’ ಗುಂಪಿನಲ್ಲಿ ಆಡಿದ 7 ಪಂದ್ಯಗಳಲ್ಲಿ 6ರಲ್ಲಿ ಜಯಿಸಿ,
ಬಾಡಿಗೆ ಬೈಕ್’ನಲ್ಲಿ 330km ಪ್ರಯಾಣಿಸಿ ವಿಧಾನಸಭೆಗೆ ತೆರಳಿದ ಜನಪ್ರತಿನಿಧಿ!
24 ಅಂಕದೊಂದಿಗೆ 2ನೇ ಸ್ಥಾನಿಯಾಗಿ ಕ್ವಾರ್ಟರ್ ಪ್ರವೇಶಿಸಿತ್ತು. ಅತ್ತ ‘ಬಿ’ ಗುಂಪಿನಲ್ಲಿದ್ದ ವಿದರ್ಭ ಆಡಿದ 7 ಪಂದ್ಯಗಳಲ್ಲಿ 5ರಲ್ಲಿ ಗೆದ್ದಿದ್ದು, 20 ಅಂಕದೊಂದಿಗೆ ಅಗ್ರಸ್ಥಾನಿಯಾಗಿ ಕ್ವಾರ್ಟರ್ ಪ್ರವೇಶಿಸಿದೆ. ಕಳೆದ ಬಾರಿ ರಾಜ್ಯ ತಂಡ ಸೆಮೀಸ್ಗೇರಿತ್ತು. ಇನ್ನೂ 3 ಕ್ವಾರ್ಟರ್ ಫೈನಲ್ ಪಂದ್ಯಗಳು ನಡೆಯಲಿದ್ದು, ಹರ್ಯಾಣ–ಬಂಗಾಳ, ರಾಜಸ್ಥಾನ–ಕೇರಳ ಹಾಗೂ ಮುಂಬೈ–ತಮಿಳುನಾಡು ತಂಡಗಳು ಮುಖಾಮುಖಿಯಾಗಲಿವೆ. ಎಲ್ಲಾ ಪಂದ್ಯಗಳೂ ರಾಜ್ಕೋಟ್ನ ವಿವಿಧ 4 ಕ್ರೀಡಾಂಗಣಗಳಲ್ಲಿ ನಡೆಯಲಿವೆ.