ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ ಕಾಟೇರ ಚಿತ್ರವು ಡಿಸೆಂಬರ್ 29ರಂದು ರಾಜ್ಯಾದ್ಯಂತ ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ
ವಾರದ ದಿನಗಳಲ್ಲೂ ಚಿತ್ರ ಉತ್ತಮ ಗಳಿಕೆ ಕಂಡಿದ್ದು, ಬಿಡುಗಡೆಯಾದ ಒಂದೇ ವಾರದಲ್ಲಿ ಚಿತ್ರ 100 ಕೋಟಿ ರೂಪಾಯಿ ಗಳಿಕೆ ಮಾಡಿ ವಿಶೇಷ ದಾಖಲೆಗೆ ಪಾತ್ರವಾಗಿತ್ತು.
ಚಿತ್ರತಂಡದವರು ಹೇಳಿರುವ ಪ್ರಕಾರ ಸಿನಿಮಾ ಎರಡನೇ ವಾರಕ್ಕೆ 157.42 ಕೋಟಿ ಕಮಾಯಿ ಮಾಡಿದೆ ಎಂದು ತಿಳಿದು ಬಂದಿದೆ. ಮೊದಲ ವಾರದಲ್ಲಿ 406 ಚಿತ್ರಮಂದಿರಗಳಲ್ಲಿ ಮತ್ತು 72 ಮಲ್ಟಿಫ್ಲೆಕ್ಸ್ ಗಳಲ್ಲಿ ಬಿಡುಗಡೆ ಯಾಗಿತ್ತು. 2 ನೇ ವಾರದಲ್ಲಿ462 ಥೇಟರ್ ಗಳಲ್ಲಿ ಮತ್ತು 72 ಮಲ್ಟಿಫ್ಲೆಕ್ಸ್ ಗಳಲ್ಲಿ ತನ್ನ ಯಶಸ್ವಿ ಪ್ರದರ್ಶನ ಮುಂದುವರೆಸಿತ್ತು. ಇದೀಗ ಮೂರನೇ ವಾರಕ್ಕೆ ಕಾಲಿಟ್ಟಿದ್ದು, ಒಟ್ಟು 416 ಥೇಟರ್ ಗಳಲ್ಲಿ ಮತ್ತು 72 ಮಲ್ಟಿಫ್ಲೆಕ್ಸ್ ಗಳಲ್ಲಿ ತನ್ನ ಯಶಸ್ವಿ ಪ್ರದರ್ಶನ ಮುಂದುವರೆಸಿದೆ