ರಾಜ್ಯದಲ್ಲಿ ಕಾಟೇರ ಹವಾ ಜೋರಾಗಿದೆ. ಕರ್ನಾಟಕದಲ್ಲೇ ಬಾಕ್ಸ್ ಆಫೀಸಿಗೆ ಕೋಟಿ ಕೋಟಿ ರೂಪಾಯಿ ಹಣ ಹರಿದು ಬರುತ್ತಿದೆ. ಜೊತೆಗೆ ನೆರೆಯ ರಾಜ್ಯದಲ್ಲೂ ಕಾಟೇರ ರಿಲೀಸ್ ಆಗಿದ್ದು, ಅಲ್ಲಿಯೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಗೋವಾ, ಆಂಧ್ರಪ್ರದೇಶ, ತಮಿಳು ನಾಡಿನಲ್ಲೂ ಕಾಟೇರ ಬಿಡುಗಡೆ ಆಗಿದ್ದು, ಅಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಥಿಯೇಟರ್ ಆಗಮಿಸಿದ್ದಾರೆ. ಸಿನಿಮಾಗೆ ಅತ್ಯುತ್ತಮ ರೆಸ್ಪಾನ್ಸ್ ಬಂದಿರುವ ಹಿನ್ನೆಲೆಯಲ್ಲಿ ವಿದೇಶದಲ್ಲೂ ಚಿತ್ರವನ್ನು ರಿಲೀಸ್ ಮಾಡಲು ಚಿತ್ರತಂಡ ಸಿದ್ಧತೆ ಮಾಡಿಕೊಳ್ಳುತ್ತಿದೆ.
ಕಾಟೇರ ಸಿನಿಮಾದ ಅಬ್ಬರ ಮೂರನೇ ದಿನಕ್ಕೂ ಮುಂದುವರೆದಿದೆ. ಮೂರನೇ ದಿನದ ಕಲೆಕ್ಷನ್ ಬರೋಬ್ಬರಿ 20.94 ಕೋಟಿ ಎಂದು ಅಂದಾಜಿಸಲಾಗಿದೆ. ವೀಕೆಂಡ್ ನಲ್ಲಿ ಕಾಟೇರ ದಾಖಲೆ ರೀತಿಯಲ್ಲಿ ಹಣ ಮಾಡಿದೆ. ಎರಡನೇ ದಿನದ ಕಲೆಕ್ಷನ್ 17.35 ಕೋಟಿ ರೂಪಾಯಿ ಆಗಿದ್ದರೆ. ಮೊದಲ ದಿನ ಮತ್ತು ಎರಡನೇ ದಿನ ಹಾಗೂ ಮೂರನೇ ದಿನದ ಸೇರಿ ಒಟ್ಟು ಮೂರು ದಿನಕ್ಕೆ 58.08 ಕೋಟಿ ರೂಪಾಯಿ ಬಾಕ್ಸ್ ಆಫೀಸಿಗೆ ಹರಿದು ಬಂದಿದೆ.
ಕಾಟೇರ ಸಿನಿಮಾ ರಿಲೀಸ್ ಆಗಿ ಒಂದೇ ದಿನಕ್ಕೆ ಕೋಟಿ ಕೋಟಿ ರೂಪಾಯಿ ಬಾಕ್ಸ್ ಆಫೀಸಿಗೆ (Box Office) ಹರಿದು ಬಂದಿತ್ತು. ಕಾಟೇರ ಸಿನಿಮಾದ ಮೊದಲ ದಿನದ ಗಳಿಕೆ ಅಂದಾಜು 19.79 ಕೋಟಿ ರೂಪಾಯಿ ಎಂದು ಹೇಳಲಾಗಿತ್ತು. ಹಾಗಾಗಿ ಸಹಜವಾಗಿಯೇ ಚಿತ್ರತಂಡ ಮತ್ತು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.
ದರ್ಶನ್ ಅಭಿನಯದ ಬಹುನಿರೀಕ್ಷಿತ ಕಾಟೇರ ಸಿನಿಮಾ (Kaatera Cinema) ರಾಜ್ಯಾದ್ಯಂತ ರಿಲೀಸ್ ಆಗಿದ್ದು, ಚಕ್ರವರ್ತಿಯ ಅಬ್ಬರ ಜೋರಾಗಿದೆ. ಮೊನ್ನೆಯಿಂದ ಸಿನಿಮಾ ಥಿಯೇಟರ್, ಮಾಲ್ಗಳ ಮುಂದೆ ಕಿಕ್ಕಿರಿದು ನಿಂತಿರುವ ಅಭಿಮಾನಿಗಳು (Darshan Fans) ದರ್ಶನ್ ಕಟೌಟ್ಗೆ ಹಾರ ಹಾಕಿ, ಪಟಾಕಿ ಸಿಡಿಸಿ ಸಂಭ್ರಮಿಸುತ್ತಿದ್ದಾರೆ. ಡಿಬಾಸ್ ಡಿಬಾಸ್ ಎಂದು ಜಯಘೋಷ ಹಾಕುತ್ತಾ ಹುಚ್ಚೆದ್ದು ಕುಣಿಯುತ್ತಿದ್ದಾರೆ.
ಮೊದಲ ದಿನ ಬೆಂಗಳೂರಿನ ಜೆ.ಪಿ.ನಗರದ ಸಿದ್ದೇಶ್ವರ ಚಿತ್ರಮಂದಿರದಲ್ಲಿ ಅಭಿಮಾನಿಗಳಿಗಾಗಿ ಫ್ಯಾನ್ಸ್ ಶೋ ಆಯೋಜನೆ ಮಾಡಲಾಗಿತ್ತು. ಸಿನಿಮಾ ನೋಡಿ ಹೊರ ಬಂದ ಅಭಿಮಾನಿಗಳು ಸಾರಥಿಗೆ ಜೈಕಾರ ಕೂಗತೊಡಗಿದ್ದಾರೆ. ಈ ನಡುವೆ ಕಾಟೇರಮ್ಮನ ಗುಡಿ ಮಾಡಿ ದೇವಿ ಪ್ರತಿಮೆ ಸ್ಥಾಪಿಸಿರುವ ದೃಶ್ಯಗಳು ಕಂಡುಬಂದಿವೆ.