ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣಾ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಮೊದಲ ಹಂತದ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ರಾಜ್ಯದಲ್ಲಿ ಹೆಚ್ಚು ಕ್ಷೇತ್ರಗಳನ್ನು ಗೆಲ್ಲಬೇಕೆಂಬ ಹಠದಿಂದ ಎನ್ಡಿಎ ಹಾಗೂ ಕಾಂಗ್ರೆಸ್ ನಾಯಕರು ಭರ್ಜರಿ ಪ್ರಚಾರ ನಡೆಸ್ತಿದ್ದಾರೆ.. ಇಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮಿಸಲಿದ್ದು ಭರ್ಜರಿ ಪ್ರಚಾರ ನಡೆಸಲಿದ್ದಾರೆ.
ಇನ್ನು ಭಾನುವಾರವಷ್ಟೇ ಅಬ್ಬರದ ಪ್ರಚಾರ ನಡೆಸಿ ಹೋಗಿರುವ ಪ್ರಧಾನಿ ಮೋದಿ ಏಪ್ರಿಲ್ 20ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಇತ್ತ ಮಾಜಿ ಸಿಎಂ ಹೆಚ್ಡಿಕೆ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ವಾಕ್ ಸಮರ ಇನ್ನು ನಿಲ್ಲುತ್ತಿಲ್.ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ರಾಜ್ಯದಲ್ಲಿ ಪ್ರಚಾರದ ಭರಾಟೆ ಕೂಡ ತೀವ್ರವಾಗಿದೆ..
Rama Navami 2024: ರಾಮ ನವಮಿ ಯಾವಾಗ.? ಪೂಜಾ ವಿಧಿ ವಿಧಾನ, ಮಹತ್ವ ತಿಳಿಯಿರಿ
ಇಂದು ರಾಜ್ಯದಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅಬ್ಬರದ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನ 1.20ಕ್ಕೆ ಹೆಚ್ಎಎಲ್ ಏರ್ಪೋರ್ಟ್ಗೆ ಆಗಮಿಸಲಿದ್ದು, 2 ಗಂಟೆಗೆ ಮಂಡ್ಯಗೆ ತೆರಳಿದ್ದಾರೆ. ಬಳಿಕ ಮಂಡ್ಯದಲ್ಲಿ ನಡೆಯಲಿರುವ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.. ಬಳಿಕ 4 ಗಂಟೆಗೆ ಕೋಲಾರದಲ್ಲಿ ನಡೆಯಲಿರುವ ಸಾರ್ವಜನಿಕ ಸಭೆಯಲ್ಲಿ ಅಬ್ಬರದ ಪ್ರಚಾರ ನಡೆಸಲಿದ್ದಾರೆ.