ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದ ಕನ್ನಡದ ಕಿರುತೆರೆ ನಟಿ ಕವಿತಾ ಗೌಡ ಹಾಗೂ ಚಂದನ್ ಕುಮಾರ್ಗೆ ಗಂಡು ಮಗು ಜನಿಸಿದೆ. ಇದರಿಂದ ಎರಡು ಫ್ಯಾಮಿಲಿಯಲ್ಲೂ ಖುಷಿ ದುಪ್ಪಟ್ಟಾಗಿದೆ. ಲಕ್ಷ್ಮೀ ಬಾರಮ್ಮ ಸೀರಿಯಲ್ ಮೂಲಕ ಖ್ಯಾತಿ ಪಡೆದುರುವ ಈ ಸ್ಟಾರ್ ಜೋಡಿ ಚೊಚ್ಚಲ ಗಂಡು ಮಗುವಿಗೆ ವೆಲ್ಕಮ್ ಹೇಳಿದ್ದಾರೆ.
ಕವಿತಾ ಗೌಡ ಹಾಗೂ ಚಂದನ್ ಕುಮಾರ್ ದಂಪತಿ ಇತ್ತೀಚೆಗಷ್ಟೇ ಗಂಡು ಮಗುವಿನ ಪಾಲಕರಾಗಿದ್ದರು. ಈ ಮಗುವಿನ ಮುಖವನ್ನು ರಿವೀಲ್ ಮಾಡಲಿ ಎಂದು ಫ್ಯಾನ್ಸ್ ಬಯಸುತ್ತಿದ್ದರು. ಈ ಕೋರಿಕೆಯನ್ನು ಅವರು ಈಡೇರಿಸಿದ್ದಾರೆ.
ಚಂದನ್ ಹಾಗೂ ಕವಿತಾ ಒಂದೇ ಧಾರಾವಾಹಿಯಲ್ಲಿ ನಟಿಸಿದವರು. ಈ ಮೊದಲು ಪ್ರಸಾರ ಕಾಣುತ್ತಿದ್ದ ‘ಲಕ್ಷ್ಮೀ ಬಾರಮ್ಮ’ದಲ್ಲಿ ಒಟ್ಟಾಗಿ ತೆರೆ ಹಂಚಿಕೊಂಡಿದ್ದರು. ಆ ಬಳಿಕ ಇಬ್ಬರ ಮಧ್ಯೆ ಪ್ರೀತಿ ಮೂಡಿತು. ನಂತರ ಮದುವೆ ಆಗುವ ನಿರ್ಧಾರ ತೆಗೆದುಕೊಂಡರು.
ಲವು ಸೆಲೆಬ್ರಿಟಿಗಳು ಮಕ್ಕಳ ಮುಖವನ್ನು ರಿವೀಲ್ ಮಾಡೋಕೆ ಇಷ್ಟಪಡುವುದಿಲ್ಲ. ಆದರೆ, ಕವಿತಾ ಗೌಡ ಹಾಗೂ ಚಂದನ್ ಆ ರೀತಿ ಅಲ್ಲ. ಅವರು ಮಗುವಿನ ಮುಖವನ್ನು ಎಲ್ಲರಿಗೂ ತೋರಿಸಿದ್ದಾರೆ.