ಕೆಸಿಸಿ ಕಪ್ ದೇಶದಲ್ಲೇ ವಿನೂತನ ಪ್ರಯತ್ನ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೋಮವಾರ ರಾತ್ರಿ ನಡೆದ ಕೆಸಿಸಿ ಕಪ್ ಫೈನಲ್ ಪಂದ್ಯ ವೀಕ್ಷಿಸಿದ ಉಪಮುಖ್ಯಮಂತ್ರಿಗಳು ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಅಭಿಮಾನಿಗಳ ಜತೆ ಸೇರಿ ಈ ಕೆಸಿಸಿ ಕಪ್ ಪಂದ್ಯಾವಳಿಯನ್ನು ಬಹಳ ಸಂತೋಷದಿಂದ ನಾನು ವೀಕ್ಷಣೆ ಮಾಡಿದ್ದೇನೆ. ಇಂತಹ ಪ್ರಯತ್ನಕ್ಕೆ ನಮ್ಮ ಸರ್ಕಾರ ಸದಾ ನಿಮ್ಮ ಜತೆ ಇರುತ್ತದೆ. ಕ್ರಿಸ್ಮಸ್ ಮತ್ತು ಹೊಸ ವರ್ಷದ ಸಂದರ್ಭದಲ್ಲಿ ಎಲ್ಲರಿಗೂ ಶುಭವಾಗಲಿ. ಕನ್ನಡ ಚಿತ್ರರಂಗ ದೇಶಕ್ಕೆ ಮಾದರಿಯಾಗುತ್ತಿದೆ. ಎಲ್ಲರಿಗೂ ಈ ಸಂದರ್ಭದಲ್ಲಿ ಶುಭಕೋರುತ್ತೇನೆ ಎಂದರು.
ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, ಕೋವಿಡ್ ಸೋಂಕಿನ ಸಂಖ್ಯೆ ಹೆಚ್ಚಳದ ಬಗ್ಗೆ ಕೇಳಿದಾಗ, ಯಾರೂ ಗಾಬರಿಪಡುವ ಅಗತ್ಯವಿಲ್ಲ. ಮುಂಜಾಗ್ರತೆಯಿಂದ ಇರೋಣ. ಈ ವಿಚಾರವಾಗಿ ಸಚಿವ ಸಂಪುಟ ಉಪ ಸಮಿತಿ ಹಾಗೂ ತಾಂತ್ರಿಕ ಸಮಿತಿಯಿಂದ ಹೆಚ್ಚಿನ ಮಾಹಿತಿ ಸಿಗಲಿದೆ ಎಂದು ತಿಳಿಸಿದರು.