ಹೈದರಾಬಾದ್ :– ಕೆಸಿಆರ್ ದೇಶದಲ್ಲಿಯೇ ಅತ್ಯಂತ ಭ್ರಷ್ಟ ಸರ್ಕಾರ ನಡೆಸುತ್ತಿದ್ದಾರೆ ಎಂದು AICC ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ತೆಲಂಗಾಣಕ್ಕಾಗಿ ಕಾಂಗ್ರೆಸ್ ಪಕ್ಷ ಏನು ಮಾಡಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ರಾಹುಲ್ ಗಾಂಧಿ, ತೆಲಂಗಾಣಕ್ಕಾಗಿ ಕಾಂಗ್ರೆಸ್ ಪಕ್ಷ ಏನು ಮಾಡಿದೆ ಎಂದು ಪ್ರಶ್ನಿಸುವ ಮೊದಲು, ರಾಜ್ಯಕ್ಕಾಗಿ ಬಿಆರ್ಎಸ್ ನಾಯಕ, ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ಏನು ಮಾಡಿದ್ದಾರೆ ಎಂಬುದನ್ನು ಜನರಿಗೆ ಹೇಳಲಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಕೆಸಿಆರ್ ಅವರು ದೇಶದಲ್ಲಿಯೇ ಅತ್ಯಂತ ಭ್ರಷ್ಟ ಸರ್ಕಾರವನ್ನು ನಡೆಸುತ್ತಿದ್ದಾರೆ. ಹೆಚ್ಚು ಹಣ ಗಳಿಸುವಂತಹ ಖಾತೆಗಳು ತಮ್ಮ ಕುಟುಂಬಸ್ಥರ ಬಳಿಯೇ ಇಟ್ಟುಕೊಂಡಿದ್ದಾರೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೊದಲ ಸಂಪುಟ ಸಭೆಯಲ್ಲಿಯೇ ಪಕ್ಷ ನೀಡಿರುವ ಆರು ಭರವಸೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ರಾಹುಲ್ ಹೇಳಿದರು.
‘ತೆಲಂಗಾಣ ಚುನಾವಣೆಯಲ್ಲಿ ಊಳಿಗಮಾನ್ಯ ಪದ್ಧತಿಯನ್ನು ಅನುಸರಿಸುವ ಸರ್ಕಾರ ಮತ್ತು ಜನರ ಪರವಾಗಿರುವ ಸರ್ಕಾರದ ನಡುವೆ ಹೋರಾಟ ನಡೆಯಲಿದೆ ಎಂದರು.