ಬೆಂಗಳೂರು:- ನಾಗಮಂಗಲ ಗಲಭೆ ಹಿಂದೆ ಕೇರಳಿಗರ ಕೈವಾಡ ಶಂಕೆ ಇದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೊಸ ಬಾಂಬ್ ಸಿಡಿಸಿದ್ದಾರೆ.
ನಾಗಮಂಗಲ ಗಲಭೆ ಪ್ರಕರಣ: ಕೇರಳದವರ ಲಿಂಕ್ ಇದೆ – ಛಲವಾದಿ ನಾರಾಯಣಸ್ವಾಮಿ
X ಮಾಡಿರುವ ಅಶೋಕ್, ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆಯಲ್ಲಿ ಪಿಎಫ್ಐ, ಕೆಇಡಿ ಅಂತಹ ನಿಷೇಧಿತ ಸಂಘಟನೆಗಳ ನಂಟು ಹೊಂದಿರುವ ಕೇರಳ ಮೂಲದ ವ್ಯಕ್ತಿಗಳ ಕೈವಾಡವಿದೆ ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದು, ಈ ದುರುಳರು ಗಲಭೆಗೊ ಮುನ್ನ 150 ಮಾಸ್ಕ ಖರೀದಿಸಿದ್ದಾರೆ, ಸಿಸಿಟಿವಿಗಳನ್ನ ನಾಶ ಮಾಡಿದ್ದಾರೆ, ಮತ್ತು ಈ ದುಷ್ಕೃತ್ಯ ಸಂಪೂರ್ಣ ಪ್ರಾಯೋಜಿತ ಮತ್ತು ಪೂರ್ವನಿಯೋಜಿವಾಗಿದೆ ಎಂಬುದು ಸ್ಥಳೀಯರ ಅನುಮಾನವಾಗಿದೆ ಎಂದಿದ್ದಾರೆ.
ಅಷ್ಟೇ ಅಲ್ಲದೆ ಸರ್ಕಾರ ದಾಖಲಿಸಿರುವ ಎಫ್ಐಆರ್ನಲ್ಲಿ ಮೊದಲ 23 ಆರೋಪಿಗಳು ಹಿಂದೂಗಳೇ ಆಗಿರುವುದರಿಂದ ಪೋಲಿಸರು ನಿಷೇಧಿತ ಸಂಘಟನೆಗಳ ಒತ್ತಡದಲ್ಲಿದ್ದಾರೆಯೇ ಎಂಬ ಸಂದೇಹ ಮೂಡುತ್ತಿದೆ ಎಂದು ಹೇಳಿದ್ದಾರೆ.
ಕೋಮುಗಲಭೆಯಲ್ಲಿ ನಿಷೇಧಿತ ಸಂಘಟನೆಗಳು ಮತ್ತು ಮತೀಯ ಮೂಲಭೂತವಾದಿಗಳ ಕೈವಾಡವಿರುವ ಬಲವಾದ ಸಂದೇಹವಿರುವುದರಿಂದ ಸ್ಥಳೀಯ ಪೋಲಿಸರು ಈ ಪ್ರಕರಣವನ್ನ ಬೇಧಿಸುವುದು ಕಷ್ಟಸಾಧ್ಯವಾಗಿದ್ದು, ಈ ನಿಟ್ಟಿನಲ್ಲಿ ಈ ಪ್ರಕರಣವನ್ನ NIA ಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.