‘ಬನಾರಸ್’ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ನಟ ಖೈದ್ ಖಾನ್ ಇದೀಗ ಮತ್ತೊಂದು ಸಿನಿಮಾದಲ್ಲಿ ತೊಡಗಿಸಿಕೊಂಡಿದ್ದಾರೆ. ಮೊದಲ ಸಿನಿಮಾದಲ್ಲೇ ಭರವಸೆ ಮೂಡಿಸಿದ್ದ ಝೈದ್ ಖಾನ್ ನಟನೆಯ ಎರಡನೇ ಚಿತ್ರದ ಟೈಟಲ್ ಘೋಷಣೆ ಆಗಿದೆ.
ಯುಗಾದಿ ಹಾಗೂ ರಂಜಾನ್ ಹಬ್ಬದ ಸಂದರ್ಭದಲ್ಲಿ ಖೈದ್ ನಟನೆಯ ಹೊಸ ಸಿನಿಮಾದ ಟೈಟಲ್ ರಿವೀಲ್ ಆಗಿದ್ದು, ‘ಕಲ್ಟ್’ ಎನ್ನುವ ಶೀರ್ಷಿಕೆ ಇಡಲಾಗಿದೆ. ಉಪಾಧ್ಯಕ್ಷ ಚಿತ್ರದ ಮೂಲಕ ಮೆಚ್ಚುಗೆ ಪಡೆದ ನಿರ್ದೇಶಕ ಅನಿಲ್ ಕುಮಾರ್ ಅವರು ‘ಕಲ್ಟ್’ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.
ಇತ್ತೀಚೆಗಷ್ಟೇ ಝೈದ್ ಖಾನ್ ಹಾಗೂ ಅನಿಲ್ ಕುಮಾರ್ ಸಿನಿಮಾ ಮಾಡುತ್ತಾರೆ ಎನ್ನುವ ಸುದ್ದಿ ಹೊರ ಬಿದ್ದಿತ್ತು. ಈ ಚಿತ್ರದ ಟೈಟಲ್ನ ಶೀಘ್ರವೇ ರಿವೀಲ್ ಮಾಡುವುದಾಗಿ ತಿಳಿಸಲಾಗಿತ್ತು. ಈಗ ಚಿತ್ರದ ಟೈಟಲ್ ರಿಲೀಸ್ ಆಗಿದೆ. ಪೋಸ್ಟರ್ ಕೂಡ ಸಖತ್ ರಗಡ್ ಆಗಿ ಮೂಡಿ ಬಂದಿದೆ. ಈ ಚಿತ್ರಕ್ಕೆ ‘ಬ್ಲಡಿ ಲವ್’ ಎನ್ನೋ ಟ್ಯಾಗ್ ಲೈನ್ ಇದ್ದು, ಸಿನಿಮಾದಲ್ಲಿ ಲವ್ ಸ್ಟೋರಿ, ಬ್ರೇಕಪ್ ಕಥೆ ಇರಲಿದೆ.
ಸಖತ್ ರಗಡ್ ಲುಕ್ನಲ್ಲಿ ಝೈದ್ ಖಾನ್ ಕಾಣಿಸಿಕೊಂಡಿದ್ದಾರೆ. ಅವರ ಮುಖದ ಮೇಲೆ ಗಾಯಗಳಿವೆ. ಹುಡುಗಿಯೊಬ್ಬಳು ಕಾಲು ಬೆರಳಿನ ಮಧ್ಯೆ ಸಿಗರೇಟ್ ಹಿಡಿದಿದ್ದು ಅದನ್ನು ಸೇದುತ್ತಿದ್ದಾರೆ ಝೈದ್. ಇದರಿಂದ ನಿರೀಕ್ಷೆ ಹೆಚ್ಚುವಂತೆ ಆಗಿದೆ. ಈ ಚಿತ್ರಕ್ಕೆ ‘ಕಲ್ಟ್ ಶಬ್ದ ಇಡೋಕೆ ಕಾರಣ ಏನು ಎಂಬುದನ್ನು ಕೂಡ ನಿರ್ದೇಶಕರು ವಿವರಿಸಿದ್ದಾರೆ.
‘ಕಲ್ಟಿಸಂ ಶಬ್ದವನ್ನು ಈಗಿನ ಯುವಜನತೆ ಕಲ್ಟ್ ಎಂದು ಹೆಚ್ಚಾಗಿ ಬಳಕೆ ಮಾಡುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಪದ ಹೆಚ್ಚು ಪ್ರಚಲಿತವಾಗಿದೆ. ಚಿತ್ರ ಕೂಡ ಯುವಜನತೆಗೆ ಹತ್ತಿರವಾಗಿರಲಿದೆ. ಈ ಕಾರಣಕ್ಕೆ ಚಿತ್ರಕ್ಕೆ ಈ ಶೀರ್ಷಿಕೆ ಫೈನಲ್ ಮಾಡಿದ್ದೇವೆ’ ಎಂದಿದ್ದಾರೆ ಅವರು. ‘ಬನಾರಸ್’ ಚಿತ್ರದಲ್ಲಿ ಮುಗ್ಧ ಹುಡುಗನಾಗಿ ಕಾಣಿಸಿಕೊಂಡಿದ್ದ ಝೈದ್ ಖಾನ್, ಈ ಚಿತ್ರದಲ್ಲಿ ಮಾಸ್ ಅವತಾರ ತಾಳಲಿದ್ದಾರೆ.