ಹುಬ್ಬಳ್ಳಿ: ಕಾಂಗ್ರೆಸ್ ನಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಬಿಂಬಿಸುವ ಯತ್ನ ನಡೆಸಲಾಗುತಿದ್ದು, ಇದೊಂದು ಮೋಸದಾಟ ಅಷ್ಟೇ ಎಂದು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಹಿರಿಯ ಭಾರತೀಯ ಜನತಾ ಪಕ್ಷದ ನಾಯಕ ಗೋವಿಂದ ಕಾರಜೋಳ ಗಂಭೀರ ಆರೋಪ ಮಾಡಿದರು.
ನಗರದಲ್ಲಿ ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು. ಮಲ್ಲಿಕಾರ್ಜುನ ಖರ್ಗೆ ಯಾವುದೇ ಕಾರಣಕ್ಕೂ ಕಾಂಗ್ರೆಸ್ ನಲ್ಲಿ ಪ್ರಧಾನಿ ಆಗಲ್ಲ. ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬರಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ಇರುವವರಗೆ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ. ಉದ್ದೇಶ ಪೂರ್ವಕವಾಗಿಯೇ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಮುನ್ನಲೇ ತರಲಾಗುತ್ತದೆ.
ಹೆಚ್ಚುತ್ತಲೇ ಇದೆ PM ಮೋದಿ ಕ್ರೇಜ್ – 2 ಕೋಟಿ ಚಂದಾದಾರರ ಸಂಖ್ಯೆ ದಾಟಿತು ಯೂಟ್ಯೂಬ್ ಚಾನೆಲ್
ದಲಿತರನ್ನ ಪ್ರಧಾನಿ ಅಭ್ಯರ್ಥಿಯಾಗಿ ಘೋಷಣೆ ಮಾಡಿದೆವು. ಆದರೂ ಅಧಿಕಾರಕ್ಕೆ ಬರಲಿಲ್ಲ ಅಂತ ಕಾಂಗ್ರೆಸ್ ನವರು ಗೊಬೆ ಕುರಿಸುವ ಹುನ್ನಾರ ಇದಷ್ಟೇ ಎಂದು ಹೇಳಿದರು. ಕಾಂಗ್ರೆಸ್ಸಿಗೆ ದಲಿತರ ಮೇಲೆ ಕಾಂಗ್ರೆಸ್ ಗೆ ಪ್ರೀತಿ ಇದ್ದರೆ 2013ರಲ್ಲಿಯೇ ಖರ್ಗೆಯವರನ್ನು ಸಿಎಂ ಮಾಡಬೇಕಿತ್ತು.
ಕಾಂಗ್ರೆಸ್ ಗೆ ಆಗ ಸ್ಪಷ್ಟವಾದ ಬಹುಮತ ಬಂದಿತ್ತು. ಕೆಪಿಸಿಸಿ ಅಧ್ಯಕ್ಷರಾಗಿ ಜಿ ಪರಮೇಶ್ವರ ರಾಜ್ಯ ಸುತ್ತಾಡಿ ಪಕ್ಷವನ್ನ ಅಧಿಕಾರಕ್ಕೆ ತಂದರು. ಆದರೆ ಜಿ ಪರಮೇಶ್ವರಗೂ ಏನು ಮಾಡಲಿಲ್ಲ. ಅಂದು ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಆಗಬೇಕೇ, ಬೇಡವೇ ಅಂತ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಆಂತರಿಕ ಚುನಾವಣೆ ನಡೆಸಿದರು.